ಟ್ರ್ಯಾಕ್ಟರ್‍ಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Tractor--02
ಚಿತ್ರದುರ್ಗ, ಜ.29- ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದೆ ಮುಖಾಮುಖಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗೌರಮ್ಮನಹಳ್ಳಿ ಬಳಿ ಸಂಭವಿಸಿದೆ. ಬೆಳಗಾವಿ ಮೂಲದ ಕವಿತಾ(28), ಬಸವಶಿವಕೆರೆಯ ಉಮೇಶ್ (28) ಮುತಪಟ್ಟ ದುರ್ದೈವಿಗಳು. ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರ್‍ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಕ್ಸಿಕ್ಯೂಟಿವ್ ಎಂಜಿನಿಯರ್ ಕವಿತಾ ಹಾಗೂ ಟ್ರ್ಯಾಕ್ಟರ್‍ನಲ್ಲಿದ್ದ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಳಿದ ಐವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಭರಮ ಸಾಗರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin