ಪದ್ಮಶ್ರೀ ಪುರಸ್ಕೃತೆ ನರಸಮ್ಮ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Narasamma--01
ಬೆಂಗಳೂರು, ಜ.29- ಅನಾರೋಗ್ಯದಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನರಸಮ್ಮ ಅವರಿಗೆ ಇಂದು ಉಸಿರಾಟ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 97 ವರ್ಷದ ನರಸಮ್ಮ ಅವರು ಸುಮಾರು 1500ಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ.

ತುಮಕೂರಿನ ಗಡಿ ಪ್ರದೇಶ ಪಾವಗಡ ತಾಲೂಕಿನ ಕುಗ್ರಾಮ ಕೃಷ್ಣಪುರದಲ್ಲಿ ಜನಿಸಿದ ಇವರು ಎಲೆಮರೆ ಕಾಯಿಯಂತೆ ಇದ್ದರು. ಇವರ ಸೇವೆಯನ್ನು ಗುರುತಿಸಿ ರಾಷ್ಟ್ರದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆನ್ನು ನೋವಿನಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಇಂದು ದಿಢೀರನೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಆರೋಗ್ಯವಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Facebook Comments

Sri Raghav

Admin