ರೈಲಿಗೆ ಸಿಕ್ಕಿ ಯುವಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

train-sucide
ಬಳಗಾವಿ, ಜ.29- ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ನಡೆದಿದೆ. ಜಾಧವನಗರದ ಶಿವಪ್ರತಾಪ(30) ಮೃತಪಟ್ಟಿರುವ ಯುವಕ.ಕಳೆದ ಎರಡು ತಿಂಗಳಿನಿಂದ ಶಿವಪ್ರತಾಪ ಅನಾರೋಗ್ಯದಿಂದ ಬಳಲುತ್ತಿದ್ದ. ಇದರಿಂದ ಮಾನಸಿಕವಾಗಿ ನೊಂದಿದ್ದ ಈತ ಯಾರೊಂದಿಗೂ ಅಷ್ಟಾಗಿ ಮಾತನಾಡದೆ ಒಂಟಿಯಾಗಿರುತ್ತಿದ್ದ ಎನ್ನಲಾಗಿದೆ.

ಶನಿವಾರ ರಾತ್ರಿ ಮನೆಯಿಂದ ಹೊರಗೆ ಹೋದ ಈತ ನಾಲ್ಕನೆ ರೈಲ್ವೆ ಗೇಟ್ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರೈಲ್ವೆ ಪೊಲೀಸರಿಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಈತ ಜಾಧವನಗರದ ನಿವಾಸಿ ಎಂದು ಗುರುತಿಸಲ್ಪಟ್ಟ ಕಾರಣ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಪೋಷಕರು ಸ್ಥಳಕ್ಕಾಗಮಿಸಿ ಮಗನನ್ನು ಗುರುತಿಸಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin