ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜೀನಾಮೆ..?

ಈ ಸುದ್ದಿಯನ್ನು ಶೇರ್ ಮಾಡಿ

Haladi-Srinivasa-Shetty

ಬೆಂಗಳೂರು, ಜ.30-ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಕುಂದಾಪುರದ ಪಕ್ಷೇತರ ಶಾಸಕರಾದ ಹಾಲಾಡಿ ಶ್ರೀನಿವಾಸಶೆಟ್ಟಿ ರಾಣಿಬೆನ್ನೂರಿಗೆ ಸ್ಪೀಕರ್ ಕೋಳಿವಾಡ ಅವರ ಮನೆಗೆ ತೆರಳಿ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ಬಳಿಕ ಬಿಜೆಪಿ ಸೇರುವ ಸಾಧ್ಯತೆ ಎನ್ನಲಾಗಿದೆ. 2013ರ ಚುನಾವಣೆಯಲ್ಲಿ ಬಿಜೆಪಿಯಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ರಾಜೀನಾಮೆ ನೀಡಿದ ಬಳಿಕ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin