ಸ್ವಾಮಿನಾಥನ್ ವರದಿ ಜಾರಿಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ : ಅಣ್ಣಾ ಹಜಾರೆ

ಈ ಸುದ್ದಿಯನ್ನು ಶೇರ್ ಮಾಡಿ

Anna-Hazare--02

ಬೆಂಗಳೂರು, ಜ.31-ರೈತರ ಪ್ರಗತಿಗೆ ಪೂರಕವಾಗಿರುವ ಡಾ.ಸ್ವಾಮಿನಾಥನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಮಾರ್ಚ್ 23 ರಿಂದ ರಾಮಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇವೆ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.  ನಗರದಲ್ಲಿಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರೈತರ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಮಾಡುತ್ತಿವೆ. ದೇಶ ಸ್ವಾತಂತ್ರ್ಯ ಪಡೆದು ಏಳು ದಶಕಗಳೇ ಕಳೆದಿದೆ. ಈ ಏಳುಬೀಳುಗಳ ನಡುವೆ ಕೃಷಿಕರ ಸ್ಥಿತಿ ದಿನದಿಂದ ದಿನಕ್ಕೆ ಚಿಂತಾಜನಕವಾಗುತ್ತಿದೆ. ಈ ಸಂಕಷ್ಟಗಳನ್ನು ಅರಿತು ಬಗೆಹರಿಸುವಲ್ಲಿ ಯಾವ ರಾಜಕೀಯ ಪಕ್ಷಗಳು ಪ್ರಾಮಾಣಿಕ ಪ್ರಯತ್ನ ಮಾಡದಿರುವುದು ರೈತರ ದುರಂತವೇ ಸರಿ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಈ ಹಿಂದೆ ರೈತರ ಅನುಕೂಲಕ್ಕಾಗಿ ಖರೀದಿ ಕೇಮದ್ರ ಸ್ಥಾಪನೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

Facebook Comments

Sri Raghav

Admin