ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ರಿವಾಲ್ವರ್, ಮೂವರಿಗೆ ಗುಂಡೇಟು

ಈ ಸುದ್ದಿಯನ್ನು ಶೇರ್ ಮಾಡಿ

Diring-Bangaloire-02

ಬೆಂಗಳೂರು, ಫೆ.2- ಮತ್ತೆ ಬೆಂಗಳೂರಿನಲ್ಲಿ ಪೊಲೀಸರ ರಿವಾಲ್ವರ್ ಸದ್ದು ಮಾಡಿದೆ. ಇಂದು ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಬಂದೂಕು ಕಸಿದು ಪರಾರಿಯಾಗಿದ್ದ ನಾಲ್ವರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಿಗೇಹಳ್ಳಿ ಸಮೀಪದ ವೀರಸಂದ್ರ ಬಳಿ ಅಡಗಿರುವ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಪಡೆದು ವಿದ್ಯಾರಣ್ಯಪುರ ಠಾಣೆ ಪೊಲೀಸ್ ಇನ್ಸ್‍ಪೆಕ್ಟರ್ ರಾಮಮೂರ್ತಿ ಮತ್ತವರ ತಂಡ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಪೊಲೀಸರನ್ನು ನೋಡಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅವರನ್ನು ಬೆನ್ನಟ್ಟಲು ಮುಂದಾದಾಗ ಮಾರಕಾಸ್ತ್ರಗಳಿಂದ ಏಕಾಏಕಿ ಪೊಲೀಸರ ಮೇಲೆಯೇ ದಾಳಿ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಎಚ್ಚೆತ್ತ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಹೇಳುತ್ತಿದ್ದಂತೆ ಮೂವರು ಕಾಲಿಗೆ ಗುಂಡೇಟು ತಗುಲಿದೆ.
ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಇನ್ಸ್‍ಪೆಕ್ಟರ್ ರಾಮಮೂರ್ತಿ ಮತ್ತು ಸಬ್ ಇನ್ಸ್‍ಪೆಕ್ಟರ್ ಅಣ್ಣಯ್ಯ ಅವರಿಗೂ ಗಾಯಗಳಾಗಿದ್ದು , ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಮೂವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಇವರೆಲ್ಲರೂ ಉತ್ತರ ಭಾರತ ಮೂಲದವರು ಎಂದು ಹೇಳಲಾಗುತ್ತಿದೆ.
ಕಳೆದ ಜ.19ರಂದು ಟಾಟಾ ನಗರದಲ್ಲಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ನಂತರ ಅವರ ಬಳಿ ಇದ್ದ ಬಂದೂಕನ್ನು ಕಸಿದು ಪರಾರಿಯಾಗಿದ್ದರು.
ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಪತ್ತೆಗಾಗಿ ವಿಶೇಷ ತಂಡವನ್ನು ಕೂಡ ರಚಿಸಲಾಗಿತ್ತು.

Facebook Comments

Sri Raghav

Admin