ಸಿಆರ್‍ಪಿಎಫ್ ಯೋಧ ರಜೆ ಮೇಲೆ ಊರಿಗೆ ಬಂದಾಗಲೇ ಪತ್ನಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

sucaide
ದಾವಣಗೆರೆ,ಫೆ.2-ಸಿಆರ್‍ಪಿಎಫ್ ಯೋಧರೊಬ್ಬರ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಭಾನುವಳ್ಳಿ ಗ್ರಾಮದ ನಿವಾಸಿ ರಶ್ಮಿ(26)ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಈಕೆ ಕಳೆದ 4 ವರ್ಷಗಳ ಹಿಂದೆ ಯುವರಾಜ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಯುವರಾಜ್ ಸಿಆರ್‍ಪಿಎಫ್‍ನ ಯೋಧನಾಗಿದ್ದು , ನಾಲ್ಕು ದಿನಗಳ ರಜೆ ಮೇಲೆ ಊರಿಗೆ ಬಂದಿದ್ದರು.
ಈ ವೇಳೆ ರಶ್ಮಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅತ್ತೆ-ಮಾವ ವರದಕ್ಷಿಣೆ ಕಿರುಕುಳ ನೀಡಿದ್ದರಿಂದ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಶ್ಮಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‍ಐ ಕಿರಣ್‍ಕುಮಾರ್, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin