‘ಸಿದ್ದರಾಮಯ್ಯನವರಂಥ ಜನವಿರೋಧಿ, ಪಕ್ಷಪಾತಿ ಮುಖ್ಯಮಂತ್ರಿಯನ್ನು ಇತಿಹಾಸದಲ್ಲೇ ನೋಡಿರಲಿಲ್ಲ’

ಈ ಸುದ್ದಿಯನ್ನು ಶೇರ್ ಮಾಡಿ

Eshwarappa-And-Siddaramaiah
ಶಿವಮೊಗ್ಗ, ಫೆ.3- ಜನವಿರೋಧಿ, ಪಕ್ಷಪಾತಿ ಮುಖ್ಯಮಂತ್ರಿಯನ್ನು ಕರ್ನಾಟಕದ ಇತಿಹಾಸದಲ್ಲೇ ನೋಡಿರಲಿಲ್ಲ ಎಂದು ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಜನವಿರೋಧಿ ಧೋರಣೆಯಿಂದ ಜನ ಬೇಸತ್ತಿದ್ದಾರೆ. ಅವರು ಪಕ್ಷಪಾತ ನೀತಿಯಿಂದ ಆಡಳಿತ ಹದಗೆಟ್ಟಿದೆ ಎಂದು ಹರಿಹಾಯ್ದಿದ್ದಾರೆ.

ಇಂತಹ ಮುಖ್ಯಮಂತ್ರಿಯನ್ನು ನಾವೆಂದೂ ನೋಡಿರಿಲಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ನಿರಂತರವಾಗಿ ಹಿಂದೂಗಳ ಹತ್ಯೆ ನಡೆಯುತ್ತಿದೆ. ಆದರೂ ಮುಖ್ಯಮಂತ್ರಿಗಳು ಈ ಬಗ್ಗೆ ಯಾವುದೇ ತಲೆಕೆಡಿಸಿಕೊಳ್ಳುತ್ತಿಲ್ಲ. ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ಕನ್ನಡ ಸಂಘಟನೆಗಳನ್ನು ಮುಂದಿಟ್ಟುಕೊಂಡು ನಮ್ಮ ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವ ಯತ್ನ ಖಂಡನೀಯ ಎಂದರು.
ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಹೇಯಕೃತ್ಯವಾಗಿದೆ. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕೆಂದು ಒತ್ತಾಯಿಸಿದರು.

Facebook Comments

Sri Raghav

Admin