‘ಸಣ್ಣಪುಟ್ಟ ವಿಚಾರಗಳ ಬಗ್ಗೆ ಮನ್ ಕಿ ಬಾತ್‍ ಹೇಳುವ ಮೋದಿ ಮಹದಾಯಿ ವಿಷಯದಲ್ಲಿ ಮೌನಿ ಬಾಬಾ ಆಗಿದ್ದಾರೆ’

ಈ ಸುದ್ದಿಯನ್ನು ಶೇರ್ ಮಾಡಿ

Champa--01

ಬೆಂಗಳೂರು, ಫೆ.4- ಸಣ್ಣ ವಿಚಾರಕ್ಕೆಲ್ಲ ಮನ್ ಕಿ ಬಾತ್‍ನಲ್ಲಿ ಮಾತನಾಡುವ ಪ್ರಧಾನಿ ನರೇಂದ್ರ ಮೋದಿಯವರು ಮಹದಾಯಿ ವಿಷಯದಲ್ಲಿ ಮೌನಿ ಬಾಬಾ ಆಗಿದ್ದಾರೆ ಎಂದು ಸಾಹಿತಿ ಚಂದ್ರಶೇಖರ ಪಾಟೀಲ್ ಹೇಳಿದರು. ಮಹದಾಯಿಗಾಗಿ ಆಗ್ರಹಿಸಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಜನಸಾಮಾನ್ಯರ ಪಕ್ಷ ಫ್ರೀಡಂಪಾರ್ಕ್‍ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನ್ ಕಿ ಬಾತ್ ಬಗ್ಗೆ ಉದಾರತನ ತೋರುವ ಪ್ರಧಾನಮಂತ್ರಿಗಳು ರಾಜ್ಯದ ಸಮಸ್ಯೆಗಳ ಬಗ್ಗೆ ಬಾಯಿ ಬಿಡುವುದಿಲ್ಲ. ಕಳೆದ ಮೂರು ವರ್ಷಗಳಿಂದ ಮಹದಾಯಿ ಬಗ್ಗೆ ಉತ್ತರ ಕರ್ನಾಟಕ ಭಾಗದ ಜನ ನಿರಂತರ ಹೋರಾಟ ಮಾಡುತ್ತಿದ್ದಾರೆ.

ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕಾದ ಹೊಣೆಗಾರಿಕೆ ಪ್ರಧಾನಮಂತ್ರಿಗಳದ್ದಾಗಿದೆ. ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಧಾನಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರು ಮಹದಾಯಿ ಬಗ್ಗೆ ಭರವಸೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಜ್ವಲಂತ ಸಮಸ್ಯೆಯಾದ ಮಹದಾಯಿ ಬಗ್ಗೆ ಅವರು ಯಾವುದೇ ದನಿ ಎತ್ತದಿದ್ದರೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳೊಂದಿಗೆ ಚರ್ಚಿಸಿ ಮುಂದಿನ ಹೋರಾಟವನ್ನು ತೀವ್ರಗೊಳಿಸುವುದಾಗಿ ಅವರು ಹೇಳಿದರು.  ಪಕ್ಷದ ಅಧ್ಯಕ್ಷ ಡಾ.ಅಯ್ಯಪ್ಪ, ಸಂಸ್ಥಾಪಕ ಅಧ್ಯಕ್ಷ ಪಿ.ವಿ.ಸತೀಶ್, ನಾಗರಾಜ್ ಹೊಂಬಾಳ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments

Sri Raghav

Admin