ಬೆಂಕಿಬಿದ್ದು ನಾಲ್ಕು ಅಂಗಡಿಗಳು ಭಸ್ಮ, ಲಕ್ಷಾಂತರ ರೂ. ನಷ್ಟ

ಈ ಸುದ್ದಿಯನ್ನು ಶೇರ್ ಮಾಡಿ

Hassan--02

ಹಾಸನ,ಫೆ.5- ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಅಂಗಡಿಗಳು ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಧವಸ-ಧಾನ್ಯಗಳು ಸುಟ್ಟುಭಸ್ಮವಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ನಗರದ ಕಟ್ಟಿನಕೆರೆಯ ಮಾರುಕಟ್ಟೆಯಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಈ ವೇಳೆ ಅಕ್ಕಪಕ್ಕದಲ್ಲಿರುವ ನಾಲ್ಕು ಅಂಗಡಿಗಳಿಗೂ ಬೆಂಕಿಯ ಕಿಡಿ ತಾಗಿ ಈ ಅವಘಡ ಸಂಭವಿಸಿದ್ದು , ಲಕ್ಷಾಂತರ ಮೌಲ್ಯದ ಧವಸಧಾನ್ಯಗಳು ಸುಟ್ಟುಹೋಗಿವೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್‍ಸಕ್ಯೂಟ್‍ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin