ಹೈಕೋರ್ಟ್‍ನಲ್ಲಿ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

high-court
ಕರ್ನಾಟಕ ಉಚ್ಛ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ರವರ ಕಚೇರಿಯು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 101
ಹುದ್ದೆಗಳ ವಿವರ

ಸಿವಿಲ್ ನ್ಯಾಯಾಧೀಶ (ಕಿರಿಯ ಶ್ರೇಣಿ) – 101
ವಿದ್ಯಾರ್ಹತೆ : ಕನಿಷ್ಠ ಕಾನೂನು ಪದವಿ ಹೊಂದಿರಬೇಕು. ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.
ವಯೋಮಿತಿ : ಅನುಸೂಚಿತ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಇತರ ಅಭ್ಯರ್ಥಿಗಳಿಗೆ 35 ವರ್ಷ ವಯಸನ್ನು ನಿಗದಿಮಾಡಲಾಗಿದ್ದು, ಮಾಜಿ ಸೈನಿಕರಿಗೆ, ಸೇವಾ ನಿರತ (ಉಚ್ಛ ನ್ಯಾಯಾಲಯ, ಜಿಲ್ಲಾ ನ್ಯಾಯಿಕ ವಿಭಾಗ, ಪ್ರಾಸಿಕ್ಯೂಷನ್, ಸರ್ಕಾರಿ ವ್ಯಾಜ್ಯ ನಿರ್ವಹಣಾ ಇಲಾಖೆಯ ಸಹಾಯಕ ಸರ್ಕಾರಿ ಪ್ರಾಸಿಕ್ಯೂಟರ್, ಹೆಚ್ಚುವರಿ ಸರ್ಕಾರಿ ನ್ಯಾಯವಾದಿಗಳು) ಅಭ್ಯರ್ಥಿಗಳಿಗೆ 3 ವರ್ಷ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-03-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್  ವಿಳಾಸ      http://karnatakajudiciary.kar.nic.in/recruitment.asp  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments