ಅಡ್ವಾಣಿಯವರನ್ನು ಮೋದಿ ಮೂಲೆಗುಂಪು ಮಾಡಿಲ್ಲವೇ..? : ಅಂಬರೀಷ್

ಈ ಸುದ್ದಿಯನ್ನು ಶೇರ್ ಮಾಡಿ

Ambarish-02

ಬಳ್ಳಾರಿ, ಫೆ.10- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ ಎಂದು ಆರೋಪಿಸಿದ್ದಾರೆ. ಆದರೆ ಅವರು ಎಲ್.ಕೆ.ಅಡ್ವಾಣಿಯಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿಲ್ಲವೇ ಎಂಬುದಾಗಿ ಮಾಜಿ ಸಚಿವ ಅಂಬರೀಶ್ ತಿರುಗೇಟು ನೀಡಿದ್ದಾರೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯ ಮುನ್ಸಿಪಲ್ ಮೈದಾನದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಪ್ರಧಾನಿ ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ ಎಂದು ಆರೋಪಿಸಿರುವುದರಲ್ಲಿ ಅರ್ಥವಿಲ್ಲ.

ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಕುಳಿತಿದ್ದ ಸ್ಥಿತಿ ನೋಡಿದರೆ ಅಯ್ಯೋ ಎನಿಸುವಂತಿತ್ತು. ಅಡ್ವಾಣಿ ಅವರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿರುವ ಮೋದಿ ನಮ್ಮ ಪಕ್ಷದ ಬಗ್ಗೆ ಟೀಕೆ ಮಾಡುವುದೇ ಎಂದು ಲೇವಡಿ ಮಾಡಿದರು. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್,

ಸಚಿವರಾದ ರೋಷನ್‍ಬೇಗ್, ಡಿ.ಕೆ.ಶಿವಕುಮಾರ್, ಸಂತೋಷ್‍ಲಾಡ್, ಎಚ್.ಕೆ.ಪಾಟೀಲ್, ಎಚ್.ಆಂಜನೇಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್, ರಾಜ್ಯ ನಾಯಕರಾದ ಎಂ.ವೀರಪ್ಪಮೊಯ್ಲಿ, ರಾಷ್ಟ್ರೀಯ ನಾಯಕರಾದ ಆಸ್ಕರ್ ಫರ್ನಾಂಡೀಸ್, ಮಾಜಿ ಸಚಿವ ಅಲ್ಲಮ್ ವೀರಭದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಮುಖಂಡರಾದ ಅನಿಲ್‍ಲಾಡ್, ಆನಂದ್‍ಸಿಂಗ್ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin