ಬಿಜೆಪಿ-ಕಾಂಗ್ರೆಸ್ ನಂತೆ ಬೃಹತ್ ಸಮಾವೇಶಕ್ಕೆ ಜೆಡಿಎಸ್ ತಯಾರಿ

ಈ ಸುದ್ದಿಯನ್ನು ಶೇರ್ ಮಾಡಿ

JDS--01

ಬೆಂಗಳೂರು, ಫೆ.10-ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗಳ ಭರಾಟೆ ಹೆಚ್ಚಾಗುತ್ತಿದ್ದಂತೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಬೃಹತ್ ಸಮಾವೇಶಗಳನ್ನು ನಡೆಸಿರುವ ಬೆನ್ನಲ್ಲೇ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಕೂಡ ತನ್ನ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಇದೇ 17ರಂದು ಜಾತ್ಯಾತೀತ ಜನತಾದಳದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಎಲ್ಲ ಸಿದ್ದತೆ ಕೈಗೊಂಡಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಬಿಎಸ್‍ಪಿ ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವ ಜೆಡಿಎಸ್ ನಡೆಸುತ್ತಿರುವ ಬೃಹತ್ ಸಮಾವೇಶದಲ್ಲಿ ಬಿಎಸ್‍ಪಿಐ ರಾಷ್ಟ್ರೀಯ ನಾಯಕಿ ಮಾಯಾವತಿ ಪಾಲ್ಗೊಲ್ಳುತ್ತಿದ್ದಾರೆ. ಇದರೊಂದಿಗೆ ಲಕ್ಷಾಂತರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಸಮಾವೇಶದಲ್ಲಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಮುಂದಾಗಿರುವ ಜೆಡಿಎಸ್ ಅಂದು ಸುಮಾರು 130ರಿಂದ 150 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಿದೆ.

ಇದೇ ವೇಳೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಅಭ್ಯರ್ಥಿಗಳು ಭ್ರಷ್ಟಾಚಾರದ ವಿರುದ್ದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಿದ್ದಾರೆ. ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಇಚ್ಚೆಯಂತೆ ಪ್ರತಿಜ್ಞಾವಿಧಿ ಸ್ವೀಕಾರಕ್ಕೂ ಸಿದ್ದತೆ ನಡೆದಿದೆ.  ಇದೇ 17ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿಪ್ರದರ್ಶನಕ್ಕೆ ಮುಂದಾಗಿರುವ ಜೆಡಿಎಸ್ ಸಮಾವೇಶದ ಬೃಹತ್ ವೇದಿಕೆ ನಿರ್ಮಿಸಲು ಈಗಾಗಲೇ ಭೂಮಿ ಪೂಜೆ ನಡೆಸಿ ಚಾಲನೆ ನೀಡಲಾಗಿದೆ.  ಚುನಾವಣಾ ಅಭ್ಯರ್ಥಿಗಳ ಮತ ಕ್ಷೇತ್ರಗಳಲ್ಲಿನ ಮತದಾರರು ಸೇರಿದಂತೆ ಸಾಕಷ್ಟು ಮಂದಿ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದು , ನಗರದ ಯಲಹಂಕ ಬಳಿಯ ಏರ್‍ಪೋರ್ಟ್ ರಸ್ತೆಯಲ್ಲಿ ಬೃಹತ್ ಸಮಾವೇಶಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿದೆ.

ಇದೊಂದು ಐತಿಹಾಸಿಕ ಸಮಾವೇಶವಾದರೂ ಎಲ್ಲ ಅಗತ್ಯ ಕ್ರಮಗಳನ್ನು ವಹಿಸಲಾಗುತ್ತಿದ್ದು, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು, ಮಾಜಿ ಸಚಿವರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳುವ ಮೂಲಕ ಜೆಡಿಎಸ್‍ನ ಶಕ್ತಿ ಅನಾವರಣಗೊಳ್ಳಲಿದೆ.
ಪ್ರಾದೇಶಿಕ ಪಕ್ಷದ ಬೃಹತ್ ಸಮಾವೇಶ ಇದಾಗಿದ್ದು , ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆಯಲು ಜನರ ಮನಗೆಲ್ಲುವ ನಿಟ್ಟಿನಲ್ಲಿ ಸಂಘಟನೆಯ ಮಹಾಪರ್ವವಾಗಿ ಹೊರಹೊಮ್ಮಲಿದೆ.

Facebook Comments

Sri Raghav

Admin