ಅಪರಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident

ಚಿಂತಾಮಣಿ, ಫೆ.11- ಶಿಢ್ಲಘಟ್ಟ ರಸ್ತೆಯ ತಿನಕಲ್ ಗ್ರಾಮದ ಬಳಿ ಅಪರಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಿಳೆ ರಸ್ತೆಯಲ್ಲಿ ಬಿದ್ದಿರುವುದನು ಕಂಡ ದಾರಿ ಹೋಕರು ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಮಹಿಳೆ ಶವವನ್ನು ಸಾರ್ವಜನಿಕ ರವಾನಿಸಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ಕ್ರಮ ಕೈ ಗೊಂಡಿದ್ದಾರೆ.

ದ್ವಿಚಕ್ರವಾಹನ ಸವಾರನಿಗೆ ಅಪರಚಿತ ವಾಹನ ಡಿಕ್ಕಿ :
ನಗರದ ಬೆಂಗಳೂರು ರಸ್ತೆಯ ಕೆಎಸ್‍ಆರ್‍ಟಿಸಿ ಡಿಪೋ ಬಳಿ ವಾಹನವೊಂದು ದ್ವಿಚಕ್ರವಾಹನ ಸವಾರನಿಗೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿದೆ. ರಸ್ತೆ ಪಕ್ಕದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ನರೇಂದ್ರ ಎಂಬಾತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ.

Facebook Comments

Sri Raghav

Admin