ವೇತನ ತಾರತಮ್ಯ ಸರಿಪಡಿಸಲು ಆಗ್ರಹ ಪಿಯು ಉಪನ್ಯಾಸಕ – ಪ್ರಾಂಶುಪಾಲರಿಂದ ಧರಣಿ

ಈ ಸುದ್ದಿಯನ್ನು ಶೇರ್ ಮಾಡಿ

protest-1
ಬೆಂಗಳೂರು, ಫೆ.13-ವೇತನ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ಪಿಯು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿದ್ದರೆ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.ಆನಂದ್‍ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿರುವ ಪಿಯು ಉಪನ್ಯಾಸಕರು ಇಂದು ದೇಶದೆಲ್ಲೆಡೆ ಶಿವರಾತ್ರಿಯಾದರೆ, ನಮ್ಮ ಪಾಲಿಗೆ ಕರಾಳ ಶಿವರಾತ್ರಿಯಾಗಿದೆ. ನಮ್ಮ ವೇತನದಲ್ಲಿ ಸಾಕಷ್ಟು ತಾರತಮ್ಯವಿದೆ. ಸರ್ಕಾರ ತಾರತಮ್ಯ ಸರಿಪಡಿಸಬೇಕು. ಇಲ್ಲದಿದ್ದರೆ ನಾವು ನಮ್ಮ ಹೋರಾಟವನ್ನು ಮುಂದು ವರೆಸುತ್ತೇವೆ. ಮೌಲ್ಯಮಾಪನವನ್ನೂ ಕೂಡ ಬಹಿಷ್ಕರಿಸುತ್ತೇವೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.ಸರ್ಕಾರ ಎಸ್ಮಾ ಜಾರಿ ಮಾಡಿದರೂ, ನಮ್ಮನ್ನು ಜೈಲಿಗೆ ಹಾಕಿದರೂ ನಾವು ಜಗ್ಗುವುದಿಲ್ಲ. ಬೇಡಿಕೆ ಈಡೇರಿಕೆಗೆ ನಮ್ಮ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin