ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು, ಫೆ.15- ತಿಪಟೂರು ಅಮಾನಿಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಇಂದು ಬೆಳಗ್ಗೆ ಶವವು ಕೆರೆಯಲ್ಲಿ ತೇಲುತ್ತಿರುವುದನ್ನು ಸಾರ್ವಜನಿಕರು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಯಾರೆಂಬುದು ತಿಳಿದುಬಂದಿಲ್ಲ. 3 ರಿಂದ 4 ದಿನಗಳ ಹಿಂದೆಯೇ ಈ ವ್ಯಕ್ತಿ ಮೃತಪಟ್ಟಿದ್ದು, ಕೊಲೆಯೋ, ಆತ್ಮಹತ್ಯೆಯೋ ಎಂಬುದು ತಿಳಿದುಬಂದಿಲ್ಲ. ಶವವನ್ನು ಹೊರತೆಗೆದು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ನಗರ ಠಾಣೆ ಎಎಸ್‍ಐ ಲಿಂಗರಾಜು, ಉಮಾಶಂಕರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin