ತೆರೆಯ ಮೇಲೆ ‘ಕಂತ್ರಿ ಬಾಯ್ಸ್’ ಕಲರವ

ಈ ಸುದ್ದಿಯನ್ನು ಶೇರ್ ಮಾಡಿ

kantri-boys
ಇತ್ತೀಚೆಗೆ ಬರುತ್ತಿರುವ ಚಿತ್ರಗಳನ್ನು ನೋಡುತ್ತ ಹೋದರೆ ಇದು ಯಾವ ರೀತಿಯ ಚಿತ್ರ ಎಂಬ ಗೊಂದಲ ಟೈಟಲ್ ನೋಡುತ್ತಿದ್ದಾಗಲೇ ಅನ್ನಿಸುತ್ತದೆ. ಅದೇ ರೀತಿ ಈ ವಾರ ಕಂತ್ರಿಬಾಯ್ಸ್ ಎಂಬ ಶೀರ್ಷಿಕೆಯೊಂದಿಗೆ ಒಂದು ಸಂದೇಶವನ್ನು ಹೇಳಲು ಹೊರಟಿದೆ ಇಲ್ಲೊಂದು ತಂಡ. ಟೆರಾಯನ್ಸ್ ಎಂಟರ್‍ಟೈನ್‍ಮೆಂಟ್ ಬ್ಯಾನರ್‍ಅಡಿ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕಿರುತೆರೆಯ ಸಿಲ್ಲಿ ಲಲ್ಲಿ ಸೇರಿದಂತೆ ಹಲವಾರು ಕಾಮಿಡಿ ಧಾರಾವಾಹಿಗಳಿಗೆ ಬರಹಗಾರರಾಗಿ ಕೆಲಸ ಮಾಡಿದ್ದ ರಾಜು ಚಟ್ನಳ್ಳಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎಂ.ಸಿ.ಹೇಮಂತ್ ಗೌಡ ಚಿತ್ರಕ್ಕೆ ಬಂಡವಾಳ ಹಾಕಿ ಚಿತ್ರ ನಿರ್ಮಿಸಿದ್ದಾರೆ.  ರಿಲೀಸ್ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಚಿತ್ರತಂಡ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ರಾಜು ಚಟ್ನಳ್ಳಿ ಇದೊಂದು ಸಂಪೂರ್ಣ ಹಾಸ್ಯ  ಚಿತ್ರ. ಹೆಣ್ಣನ್ನು ಒಳ್ಳೇ ರೀತಿಯಲ್ಲಿ ನೋಡು ಎನ್ನುವುದೇ ನಮ್ಮ ಉದ್ದೇಶ. ಯಾವುದೋ ಕಾರಣಕ್ಕಾಗಿ ಪರಿಸ್ಥಿತಿಗೆ ಸಿಲುಕಿ ತಪ್ಪುದಾರಿ ಹಿಡಿದಿರುತ್ತಾರೆ.  ಇಂಥವರನ್ನು ಸಮಾಜ ಗೌರವದಿಂದ ಕಾಣಬೇಕು ಎಂದು ಈ ಚಿತ್ರದಲ್ಲಿ ಹೇಳಿದ್ದೇವೆ. ಚಿತ್ರದಲ್ಲಿ ಅಭಿನಯಿಸಿರುವವರು ಯಾರೂ ಹೊಸಬರ ಹಾಗೆ ಕಾಣುವುದಿಲ್ಲ. ಗಡ್ಡಪ್ಪ ಚಿತ್ರದಲ್ಲಿ ಒಳ್ಳೇ ಪಾತ್ರ ಮಾಡಿದ್ದಾರೆ.
ಚಿತ್ರವನ್ನು ನೋಡಿದವರೆಲ್ಲ ಮೆಚ್ಚಿದ್ದಾರೆ ಎಂದು ಹೇಳಿದರು.

ನಂತರ ಚಿತ್ರದ ನಿರ್ಮಾಪಕ ಎಂ.ಸಿ. ಹೇಮಂತಗೌಡ ಮಾತನಾಡಿ, ಈ ನಿರ್ದೇಶಕರು ಮಾಡಿದ್ದ ಕಥೆ ತುಂಬಾ ಇಷ್ಟವಾಯಿತು. ಸಿನಿಮಾ ಕೂಡ ಅದ್ಭುತವಾಗಿ ಮೂಡಿಬಂದಿದೆ. ಜನರಿಗೆ ಖಂಡಿತ ಉತ್ತಮ ಮನರಂಜನೆ ನೀಡಲಿದೆ ಎಂಬ ನಂಬಿಕೆ ವ್ಯಕ್ತಪಡಿಸಿದರು. ವಿತರಕ ವೆಂಕಟ ಗೌಡ ಮಾತನಾಡಿ, ನಾನು ಒಂದೆರಡು ಸಿನಿಮಾ ರಿಲೀಸ್ ಮಾಡಿದ್ದೆ. ಸ್ವಂತ ಆಫೀಸ್ ಮಾಡಿದ ಮೇಲೆ ರಿಲೀಸ್ ಮಾಡುತ್ತಿರುವ ಮೊದಲ ಚಿತ್ರವಿದು. ಈವರೆಗೆ 75ರಿಂದ 80 ಚಿತ್ರಮಂದಿರಗಳು ಕನ್‍ಫರ್ಮ್ ಆಗಿವೆ. ಹತ್ತರಿಂದ ಹದಿನೈದು ಮಲ್ಟಿಪ್ಲೆಕ್ಸ್ ಕೂಡ ಸಿಕ್ಕಿವೆ. ಒಳ್ಳೇ ಸಿನಿಮಾ ಮಾಡಿದ್ದಾರೆ. ನನಗೂ ತುಂಬಾ ಇಷ್ಟವಾಯಿತು ಎಂದು ಹೇಳಿದರು. ತಿಥಿ ಖ್ಯಾತಿಯ ಗಡ್ಡಪ್ಪ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಹುತೇಕ ಹೊಸ ಕಲಾವಿದರನ್ನು ಬಳಸಿಕೊಂಡು ಕಂತ್ರಿಬಾಯ್ಸ್ ಚಿತ್ರವನ್ನು ನಿರ್ದೇಶಕ ರಾಜು ಚಟ್ನಳ್ಳಿ ನಿರೂಪಿಸಿದ್ದಾರೆ. ಮರ್ಡರಿ ಮಿಸ್ಟ್ರಿಯ ಥ್ರಿಲ್ಲರ್ ಕಥೆಯನ್ನು ಚಿತ್ರ ಒಳಗೊಂಡಿದೆ. ನಟ ಅರವಿಂದ್ ಮಾತನಾಡಿ, ಇದು ನನ್ನ ಮೂರನೇ ಚಿತ್ರ. ಉದಾಸೀನತೆಯಿಂದ ಇರುವ ಹುಡುಗನಾಗಿ ಅಭಿನಯಿಸಿದ್ದೇನೆ ಎಂದು ತನ್ನ ಪಾತ್ರದ ಬಗ್ಗೆ ಹೇಳಿದರು. ನಟಿಯರಾದ ಸಂಧ್ಯಾ, ಅನಕ, ವಾಸಂತಿ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು.

ನಿರ್ಮಾಪಕ ಹೇಮಂತ್ ಗೌಡ, ಜೋಕರ್ ಹನುಮಂತ್, ಹೇಮಂತ್ ಸೂರ್ಯ, ದರ್ಶನ್ ರಾಜ್ ಸೇರಿದಂತೆ ಹಲವಾರು ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಹೇಮಂತ್ ಗೌಡ ಅವರ ಜೊತೆ ನಿರ್ಮಾಣದಲ್ಲಿ ಎಂ.ಸಿ. ರೇಣುಕ, ಮೋಹನ್ ಕೆ. ಕೃಷ್ಣಮೂರ್ತಿ ಎಂ, ಶ್ರೀಧರ್‍ರಾಜು, ದರ್ಶನ್‍ರಾಜ್ ಕೈಜೋಡಿಸಿದ್ದಾರೆ. ಪಿ.ವಿ ಆರ್. ಸ್ವಾಮಿ ಅವರ ಛಾಯಾಗ್ರಹಣ, ಕಿರಣ್ ಮಹದೇವ್ ಅವರ ಸಂಗೀತ ಸಂಯೋಜನೆ, ಡಿ. ರವೀಂದ್ರನಾಥ್ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.
ಸಮಾ ಜಕ್ಕೆ ಒಂದು ಸಂದೇಶ ನೀಡುವ ಪ್ರಯ ತ್ನದಲ್ಲಿ ಕಂತ್ರಿಬಾಯ್ಸ್ ಬೆಳ್ಳಿ ಪರದೆ ಮೇಲೆ ಬರಲು ಸಿದ್ಧ ವಾಗಿದೆ. ಇನ್ನೇನಿದ್ದರೂ ಪ್ರೇಕ್ಷಕ ಪ್ರಭುಗಳು ನೋಡಿ ನಿರ್ಧರಿಸಬೇಕಿದೆ.

Facebook Comments

Sri Raghav

Admin