ಬ್ಯಾಂಕ್ ವ್ಯವಸ್ಥಾಪಕರಿಗೆ ಪೊಲೀಸ್ ಆಯುಕ್ತ ಸುನಿಲ್‍ಕುಮಾರ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Suneel-Kumar--02

ಬೆಂಗಳೂರು, ಫೆ.15- ಬ್ಯಾಂಕುಗಳಿಗೆ ಶಸ್ತ್ರಸಜ್ಜಿತರಾದ ಭದ್ರತಾ ಸಿಬ್ಬಂದಿ ಒದಗಿಸಬೇಕೆಂದು ಆರ್‍ಬಿಐ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಬ್ಯಾಂಕುಗಳು ಈ ನಿಯಮವನ್ನು ಪಾಲಿಸದಿದ್ದರೆ ಆರ್‍ಬಿಐಗೆ ಸಮಗ್ರ ವರದಿ ಕಳುಹಿಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಸುನಿಲ್‍ಕುಮಾರ್ ಎಚ್ಚರಿಸಿದ್ದಾರೆ. ಇತ್ತೀಚೆಗೆ ಬ್ಯಾಂಕ್‍ಗಳ ಎಟಿಎಂಗಳಲ್ಲಿ ಹಣ ದರೋಡೆಗೆ ಯತ್ನವಾಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಬ್ಯಾಂಕುಗಳ ಸೆಕ್ಯೂರಿಟಿಗೆ ಸಂಬಂಧಿಸಿದಂತೆ ಪೊಲೀಸರು ಮತ್ತು ಬ್ಯಾಂಕ್ ಮುಖ್ಯಸ್ಥರ ಜತೆ ಸಭೆ ನಡೆಸಿ ಎಟಿಎಂಗಳ ಸೆಕ್ಯೂರಿಟಿ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಈ ಹಿಂದಿನ ಸಭೆಯಲ್ಲಿ ಎಟಿಎಂ ಭದ್ರತೆ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ಈಗಾಗಲೇ ಆರ್‍ಬಿಐ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದ್ದರೂ ಬ್ಯಾಂಕುಗಳು ತಮಗೆ ದುಬಾರಿಯಾಗುತ್ತದೆ ಎಂಬ ದೃಷ್ಟಿಯಿಂದ ಆರ್‍ಬಿಐ ಸೂಚನೆಯನ್ನು ನಿರ್ಲಕ್ಷಿಸುತ್ತಿವೆ. ಅಂತಹ ಬ್ಯಾಂಕುಗಳ ವರದಿಯನ್ನು ನಾವು ಆರ್‍ಬಿಐಗೆ ನೀಡುತ್ತೇವೆ ಎಂದು ತಿಳಿಸಿದರು. ಭದ್ರತಾ ದೃಷ್ಟಿಯಿಂದ ಬ್ಯಾಂಕುಗಳು ಆರ್‍ಬಿಐ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದು ಆಯುಕ್ತರು ಹೇಳಿದರು.  ತಡರಾತ್ರಿವರೆಗೂ ಹೋಟೆಲ್‍ಗಳು ತೆರೆಯುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಿಯಮಾನುಸಾರ ಇಲಾಖೆಯ ಅನುಮತಿ ಪಡೆದು ಹೋಟೆಲ್‍ಗಳನ್ನು ತೆರೆಯಲು ತಮ್ಮ ಅಭ್ಯಂತರವಿಲ್ಲ ಎಂದರು.

Facebook Comments

Sri Raghav

Admin