ಕೈಗಾರಿಕೋದ್ಯಮಕ್ಕೆ ಪೂರಕ ಬಜೆಟ್ : ಹನುಮಂತೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

kasiia
ಬೆಂಗಳೂರು, ಫೆ.16- ಇಂದು ಮಂಡಿಸಿದ ರಾಜ್ಯ ಬಜೆಟ್ ಸಣ್ಣ ಕೈಗಾರಿಕೋದ್ಯಮದ ಬೆಳವಣಿಗೆಗೆ ಪೂರಕವಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಹನುಮಂತೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕಾಸಿಯಾ ಸಭಾಂಗಣದಲ್ಲಿ ಮಾತನಾಡಿದ ಅವರು ಮೊದಲಿಗೆ ಕಾವೇರಿಯ ವಿಷಯವು ತೃಪ್ತಿದಾಯಕವಾಗಿದೆ. ಅಲ್ಲದೇ ಸಮಾಧಾನಕರ ತೀರ್ಪು ಆಗಿದೆ ಎಂದರು.

ರಾಜ್ಯ ಬಜೆಟ್‍ನಲ್ಲಿ ಕೃಷಿಗೆ ಒತ್ತು, ಗ್ರಾಮೀಣಾಭಿವೃದ್ಧಿ ಬೆಳವಣಿಗೆಗೆ ಆದ್ಯತೆ ನೀಡಿರುವುದು ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸಿದಂತಾಗಿದೆ ಎಂದು ಹೇಳಿದರು.
ಕಾಸಿಯಾದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿರುವುದು ಸಂತಸ ತಮದಿದೆ. ಕಲಬುರ್ಗಿಯಲ್ಲಿ 5ಕೋಟಿ ವೆಚ್ಚದ ಸ್ಟಾರ್ಟ್ ಅಪ್ ಕೇಂದ್ರ ಸ್ಥಾಪನೆ. ಅಲ್ಲದೆ ಮೈಸೂರಿನಲ್ಲಿ ಕೈಗಾರಿಕೋದ್ಯಮದ ವಸ್ತು ಪ್ರದರ್ಶನದ ಸ್ಥಾಪನೆ, ಕೈಗಾರಿಕೋದ್ಯಮದ ಬೆಳವಣಿಗೆಗೆ ರಾಜ್ಯ ಸರ್ಕಾರ ಮುಮದಾಗಿದೆ ಎಂದು ಹೇಳಿದರು.

ಕೈಗಾರಿಕಾ ಪ್ರದೇಶಗಳಾದ ಬಿಡದಿ, ಹಾರೋಹಳ್ಳಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು 5 ಕೋಟಿ ರೂ. ಸಾಲ ನೀಡಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ 11 ಕೈಗಾರಿಕಾ ವಸಾಹತು ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಆಶಾದಾಯಕ ಎಂದು ಸಂತೋಷ ವ್ಯಕ್ತ ಪಡಿಸಿದರು ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಉಮಾಶಂಕರ್ ಸೇರಿದಮತೆ ಮತ್ತಿತರರು ಇದ್ದರು.

Facebook Comments

Sri Raghav

Admin