ತೀರ್ಪು ಸದ್ಯಕ್ಕೆ ಸಮಾಧಾನ ತಂದಿದೆ : ವಾಟಾಳ್

ಈ ಸುದ್ದಿಯನ್ನು ಶೇರ್ ಮಾಡಿ

vatal-nagraj
ಬೆಂಗಳೂರು, ಫೆ.16-ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸದ್ಯಕ್ಕೆ ಸಮಾಧಾನ ತಂದಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ಸುಮಾರು 20 ಟಿಎಂಸಿ ನೀರನ್ನು ಹೆಚ್ಚಾಗಿ ಬಳಸಿಕೊಳ್ಳಲು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ಸಂತಸ ತಂದಿದೆ ಎಂದು ಪ್ರತಿಕ್ರಿಯಿಸಿದರು. ತಮಿಳುನಾಡಿನಲ್ಲಿ 20 ಟಿಎಂಸಿ ಅಂತರ್ಜಲದ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ವಿಸ್ತರಣೆ ಮಾಡಲು ಸುಪ್ರೀಂಕೋರ್ಟ್ ಒಪ್ಪಿರುವುದು ಅತ್ಯಂತ ಖುಷಿಯ ವಿಷಯವಾಗಿದೆ.  ಆದರೆ ಬೆಂಗಳೂರಿಗೆ ನಿಗದಿ ಮಾಡಿರುವ ನೀರಿನ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಅವರು ಹೇಳಿದರು.

Facebook Comments

Sri Raghav

Admin