ಬಜೆಟ್ ಹೈಲೈಟ್ಸ್ : ಅಲ್ಪಸಂಖ್ಯಾತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 800 ಕೋಟಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--001

ಬೆಂಗಳೂರು,ಫೆ.16-ಅಲ್ಪಸಂಖ್ಯಾತರ ಅಭಿವೃದ್ದಿಗೆ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 800 ಕೋಟಿ ಅನುದಾನ ಒದಗಿಸಿದೆ. ಒಟ್ಟು ಈ ಬಾರಿಯ ಬಜೆಟ್‍ನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ 2221 ಕೋಟಿ ಅನುದಾನ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 15 ಕೋಟಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ. [ ಸಿದ್ದು ಲ್ಕೆಕ್ಕಾಚಾರ (Live) ]

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಜೆಇಇ, ನೀಟ್, ಗೇಟ್, ಜಿಎಂಎಟಿ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ, ಎನ್‍ಇಟಿ ಪಠ್ಯಪುಸ್ತಕಗಳ ವಿತರಣೆ, ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಮಾದರಿಯಲ್ಲಿ ಮಾಸಿಕ ತರಬೇತಿ ಭತ್ಯೆಯನ್ನು 4 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಲಾಗಿದೆ.  ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸ್‍ಗಳಲ್ಲಿ ಒಂದನೇ ವರ್ಷದ ಪ್ರವೇಶ ಹೊಂದಿರುವ ವಿದ್ಯಾರ್ಥಿಗಳಿಗೆ 25 ಸಾವಿರ, ಬಿಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ಪ್ರೋತ್ಸಾಹಧನ, ನದಾಫ್, ಪಿಂಜಾರ್ ಸಮುದಾಯದ ಸಂಘಗಳಿಗೆ ಎರಡು ಕೋಟಿ, ಬ್ಯಾರಿ ವೆಲ್ಫೇರ್ ಅಸೋಸಿಯೇಷನ್‍ಗೆ ಎರಡು ಕೋಟಿ, ಮೈಸೂರಿನಲ್ಲಿ ಹಿರಿಯ ರಾಜಕಾರಣಿ ದಿವಂಗತ ಅಜೀತ್ ಸೇಠ್ ಸಮುದಾಯ ಭವನ ನಿರ್ಮಾಣಕ್ಕೆ ಮೂರು ಕೋಟಿ ಅನುದಾನವನ್ನು ಒದಗಿಸಲಾಗಿದೆ.

ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಲ್ಲಿ ತಲಾ 25 ದಾಖಲಾತಿಗಳನ್ನು ಹೆಚ್ಚಿಸಲಾಗುವುದು. ಎಲ್ಲ ಮೆಟ್ರಿಕ್ ಪೂರ್ವದ ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪರಸ್ಪರ ಪ್ರವೇಶ ನೀಡಿ, ಹಾಸ್ಟೆಲ್‍ಗಳನ್ನು ಮೇಲ್ದರ್ಜೆಗೇರಿಸುವ ಆಶ್ವಾಸನೆ ನೀಡಲಾಗಿದೆ.

Facebook Comments

Sri Raghav

Admin