ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ತೆರೆದಾಳದಲ್ಲಿ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Bandh

ಬಾಗಲಕೋಟೆ, ಫೆ.17-ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ತೆರೆದಾಳದಲ್ಲಿ ಇಂದು ಬಂದ್ ಆಚರಿಸಲಾಯಿತು.  ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದ್‍ಗೆ ಕರೆ ನೀಡಿದ್ದು , ಇಂದು ಎಲ್ಲೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‍ಗೆ ಬೆಂಬಲ ಸೂಚಿಸಲಾಯಿತು.  ಬಸ್ ಸಂಚಾರವು ವಿರಾಳವಾಗಿದ್ದು , ಮುಂಜಾಗ್ರತ ಕ್ರಮವಾಗಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಮನವಿ ಮಾಡಿದ್ದರೂ ಬಜೆಟ್‍ನಲ್ಲಿ ಅದನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಇಂದು ಬಂದ್ ನಡೆಸಲಾಯಿತು.

Facebook Comments

Sri Raghav

Admin