ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

police-Sub-ins-1

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ಸಂಖ್ಯೆ : 164
ಹುದ್ದೆಗಳ ವಿವರ
1.ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಸಿವಿಲ್) ಪುರುಷ – 110
2.ಮಹಿಳಾ ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಸಿವಿಲ್) – 36
3.ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಸಿವಿಲ್) ಸೇವೆಯಲ್ಲಿರುವವರಿಗೆ – 15
4.ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಸಿವಿಲ್) ಪುರುಷ (ಹೈಕ) – 02
5.ಮಹಿಳಾ ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಸಿವಿಲ್),(ಹೈಕ) – 01
ವಿದ್ಯಾರ್ಹತೆ : ಯು.ಜಿ.ಸಿ ಯಿಂದ ಮಾನ್ಯತೆ ಪಡೆದಿರುವ ಅಂಗಿಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಇದಕ್ಕೆ ಸಮನಾದ ಶಿಕ್ಷಣ ಪಡೆದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 21 ವರ್ಷ ನಿಗದಿಮಾಡಲಾಗಿದೆ. ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 28 ವರ್ಷ, ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ 30 ವರ್ಷ, ಸೇವಾನಿರತ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ರೂ, ಪ,ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ   www.ksp.gov.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments