ರಾಹುಲ್‍ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ : ಪ್ರಹ್ಲಾದ್ ಜೋಷಿ

ಈ ಸುದ್ದಿಯನ್ನು ಶೇರ್ ಮಾಡಿ

Prahlad-Joshi--1

ಕಲಬುರಗಿ, ಫೆ.17- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಷಿ ಇಂದಿಲ್ಲಿ ಟೀಕಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್‍ಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ, ಶಾಂತಿ ಸುವ್ಯವಸ್ಥೆ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಚಕಾರ ಎತ್ತದೆ ಕೇವಲ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಾರೆ. ಇವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕಿಡಿಕಾರಿದರು.

ರಾಜ್ಯ ಗೃಹ ಸಚಿವ ರಾಮಲಿಂಗಾರೆರಡ್ಡಿಯವರು ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ ಅವರ ಹೇಳಿಕೆ ನೋಡಿದರೆ ಅವರೊಬ್ಬರು ಸಚಿವ ಸ್ಥಾನಕ್ಕೆ ಅರ್ಹರಲ್ಲ ಎಂಬ ಭಾವನೆ ಮೂಡುತ್ತದೆ ಎಂದರು.  ಕರಾವಳಿ ಭಾಗದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದರೂ ಅಪರಾಧಿಗಳನ್ನು ಪತ್ತೆ ಹಚ್ಚಿ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಹಿಂದೂ ಸಂಘಟನೆಗಳ ವಿರುದ್ಧವೇ ಟೀಕೆ ಮಾಡುತ್ತಾರೆ ಎಂದು ಆರೋಪಿಸಿದರು.

Facebook Comments

Sri Raghav

Admin