ಕಾಲೇಜಿನ ಮೇಲ್ಛಾವಣಿ ಕುಸಿದು ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಾಲೂರು, ಫೆ.17-ಸರ್ಕಾರಿ ಕಾಲೇಜಿನ ಮೇಲ್ಛಾವಣಿ ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು , ಒಬ್ಬರ ಸ್ಥಿತಿ ಗಂಭೀರವಾಗಿದೆ. ವಿದ್ಯಾರ್ಥಿನಿಯರಾದ ಮಮತಾ, ಶೋಭಾ, ಆಶಾ, ಮೋನಿಶಾ ಗಾಯಗೊಂಡಿದ್ದು ,ಅರುಣಾವತಿ ಸ್ಥಿತಿ ಗಂಭೀರವಾಗಿದೆ. ಮಾಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಬೆಳಗ್ಗೆ ತರಗತಿ ನಡೆಯುತ್ತಿದ್ದ ವೇಳೆ ಕೊಠಡಿಯೊಂದರ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಪ್ರಾಂಶುಪಾಲ ಹಾಗೂ ಉಪನ್ಯಾಸಕರು ಪರಿಶೀಲನೆ ನಡೆಸುತ್ತಿದ್ದು , ಮಾಲೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin