ಕಾನೂನು ಎಲ್ಲರಿಗೂ ಒಂದೇ : ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--02

ಬೆಂಗಳೂರು, ಫೆ.18- ಕಾನೂನು ಎಲ್ಲರಿಗೂ ಒಂದೇ. ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಲಾಗಿದೆ. ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ನಿನ್ನೆ ಯುಬಿ ಸಿಟಿಯಲ್ಲಿ ಉದ್ಯಮಿಯೊಬ್ಬರ ಪುತ್ರನ ಮೇಲೆ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ಹ್ಯಾರಿಸ್ ನಲ್ಪಡ್ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಪ್ರಕರಣ ಸಂಬಂಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸುತ್ತಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ಇನ್ಸ್‍ಪೆಕ್ಟರ್ ವಿಜಯ್ ಹಡಗಲಿ ಅವರು ತಪ್ಪು ಮಾಡಿದ್ದರೂ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ರಾಮಲಿಂಗಾರೆಡ್ಡಿ ಉತ್ತರಿಸಿದರು.

Facebook Comments

Sri Raghav

Admin