ಬೈಕ್‍ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಮರದ ಕೊಂಬೆ ಬಿದ್ದು ಪತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Bike--01

ವಿಜಯಪುರ, ಫೆ.18-ಬೈಕ್‍ನಲ್ಲಿ ಹೋಗುತ್ತಿದ್ದ ದಂಪತಿಯ ಮೇಲೆ ಮರದ ಕೊಂಬೆ ಬಿದ್ದು ಪತಿ ಸ್ಥಳದಲ್ಲೇ ಸಾವನ್ನಪ್ಪಿ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ತಿಕೋಟ ಬಳಿ ನಡೆದಿದೆ.  ವಿಜಯಪುರದ ನಿವಾಸಿಯಾದ ಬೇಬಿಜಾನ್ ಮುಲ್ಲಾ(36) ಮೃತಪಟ್ಟವರಾಗಿದ್ದು , ತೀವ್ರ ಗಾಯಗೊಂಡಿರುವ ಅವರ ಪತ್ನಿ ಮೆಹಬೂಬ್ ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.   ನಗರದಿಂದ ಕನಮಡಿಗೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ    ತಿಕೋಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin