ಮಗಳ ಜನ್ಮದಿನ ಸಂಭ್ರಮದಲ್ಲೇ ತಂದೆ ಸೇರಿ ನಾಲ್ವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Birthday

ಲೂಧಿಯಾನ, ಫೆ.18- ಜನ್ಮದಿನ ಆಚರಣೆ ವೇಳೆ ಪಂಜಾಬ್‍ನ ಲೂಧಿಯಾನದಲ್ಲಿ ಭಾರಿ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾಕ್‍ನಿಂದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕಿಯ ತಂದೆ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಹುಟ್ಟು ಹಬ್ಬ ಆಚರಿಸಲಾಗುತ್ತಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಹೈಟೆನ್ಷನ್ ತಂತಿ ಹಿಡಿದಿದ್ದಾನೆ. ಆಗ ತಕ್ಷಣವೇ ಆ ವ್ಯಕ್ತಿಯನ್ನು ರಕ್ಷಿಸಲು ಬಾಲಕಿಯ ತಂದೆ ಹಾಗೂ ಇತರ ಇಬ್ಬರು ದೌಡಾಯಿಸಿದ್ದಾರೆ.

ಆದರೆ, ರಕ್ಷಣೆಗೆ ಮುಂದಾಗಿದ್ದ ಈ ಮೂವರಿಗೂ ವಿದ್ಯುತ್ ಪ್ರವಹಿಸಿದೆ. ಪರಿಣಾಮ ನಾಲ್ವರೂ ಸಾವಿಗೀಡಾಗಿದ್ದಾರೆ. ಇದರಿಂದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಇನ್ನು, ನಾಲ್ವರ ಶವಗಳ ಮರಣೋತ್ತರ ಪರೀಕ್ಷೆ ಕೈಗೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
.

Facebook Comments

Sri Raghav

Admin