ಶಾಸಕ ಹ್ಯಾರೀಸ್ ಪುತ್ರನ ಬಂಧನಕ್ಕೆ ಶೆಟ್ಟರ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Jagadish-Shettar-01

ಹುಬ್ಬಳ್ಳಿ, ಫೆ.18- ಉದ್ಯಮಿ ಪುತ್ರನ ಮೇಲಿನ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಒಳಗಾಗಿರುವ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.  ನಗರದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರದ ಕಾರು ಹಾಗೂ ಇತರೆ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜನಪ್ರತಿನಿಧಿಗಳ ಮಕ್ಕಳು ಹಲ್ಲೆ ಮಾಡುವಂತಹ ವರ್ತನೆ ಸರಿಯಾದುದಲ್ಲ. ಕಾಂಗ್ರೆಸ್ ಪಕ್ಷದ ಎನ್.ಎ.ಹ್ಯಾರೀಸ್ ಅವರ ಪುತ್ರನ ವರ್ತನೆಯನ್ನು ಖಂಡಿಸುತ್ತೇವೆ. ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಹ್ಯಾರೀಸ್ ಅವರ ಪುತ್ರನನ್ನು ಬಂಧಿಸಿ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು ಆಗ್ರಹಿಸಿದರು. ಮೇಲಿಂದ ಮೇಲೆ ಇಂತಹ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ಬಗ್ಗೆ ಮಾಹಿತಿಯಿದ್ದು ನಾಳೆ ಮತ್ತೆ ಬೇರೆಯವರು ಇಂಥದ್ದೇ ತಪ್ಪು ಮಾಡಲು ಅವಕಾಶ ಮಾಡಿಕೊಡಬಾರದು ಎಂದರು.

ಈ ಬಾರಿಯ ಚುನಾವಣೆಯಲ್ಲಿ ನಾನೇ ಗೆಲುವು ಸಾಧಿಸುತ್ತೇನೆ. ಇದರಲ್ಲಿ ಸಂಶಯವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ ಬಜೆಟ್ ಮಂಡನೆ ಮಾಡಿರುವುದು ಸಂತಸದ ವಿಚಾರ. ಆದರೆ ರಾಜ್ಯದ ಆರ್ಥಿಕ ಸ್ಥಿತಿಗತಿ ಎತ್ತ ಸಾಗಿದೆ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ ಎಂದರು.

Facebook Comments

Sri Raghav

Admin