ಸಿಎಂ ಸಿದ್ದರಾಮಯ್ಯನವರ ಪುತ್ರನಿಗೆ ಗ್ರಾಮಸ್ಥರಿಂದ ಘೇರಾವ್

ಈ ಸುದ್ದಿಯನ್ನು ಶೇರ್ ಮಾಡಿ

Yatheendra

ಮೈಸೂರು, ಫೆ.18-ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಅವರಿಗೆ ಗೆಜ್ಜಗಳ್ಳಿಯ ಗ್ರಾಮಸ್ಥರು ಘೇರಾವ್ ಹಾಕಿದ ಪ್ರಸಂಗ ನಡೆದಿದೆ. ಯತೀಂದ್ರ ಅವರು ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಗೆಜ್ಜಗಳ್ಳಿಯಲ್ಲಿ ಇಂದು 15 ಲಕ್ಷ ರೂ. ವೆಚ್ಚದ ಕಾಮಗಾರಿಯೊಂದಕ್ಕೆ ಗುದ್ದಲಿ ಪೂಜೆ ನೆರವೇರಿಸಲು ತೆರಳಿದ್ದರು. ಈ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಚುನಾವಣಾ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗುದ್ದಲಿ ಪೂಜೆ ನೀವೇಕೆ ಮಾಡಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಯತೀಂದ್ರ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಜೆಡಿಎಸ್‍ನವರು ಯತೀಂದ್ರ ಅವರಿಗೆ ಗುದ್ದಲಿಪೂಜೆ ನಡೆಸದಂತೆ ಘೆರಾವ್ ಹಾಕಿದರು.

Facebook Comments

Sri Raghav

Admin