BREAKING : ಶಾಸಕ, ರೈತ ಮುಖಂಡ ಎಸ್ ಪುಟ್ಟಣ್ಣಯ್ಯ ಇನ್ನಿಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

Puttanna

ಮಂಡ್ಯ . ಫೆ.18 : ಶಾಸಕ, ರೈತ ಮುಖಂಡ, ಮಂಡ್ಯ ಜಿಲ್ಲೆ ಮೇಲುಕೋಟೆಯ ಶಾಸಕ ಎಸ್ ಪುಟ್ಟಣ್ಣಯ್ಯ(69) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಪಂದ್ಯ ವೀಕ್ಷಿಸುವ ವೇಳೆ ಎದೆ ನೋವಿನಿಂದ ಕುಸಿದು ಬಿದ್ದ ಅವರನ್ನು ಚಿಕಿತ್ಸೆಗಾಗಿ ಕೂಡಲೇ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ . ಸರ್ವೋದಯ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು 1949 ಡಿಸೇಂಬರ್ 23 ರಂದು ಮಂಡ್ಯದ ಪಾಂಡವಪುರದಲ್ಲಿ ಜನಿಸಿದ್ದ ಇವರು ರೈತನಾಯಕನಾಗಿ ಬೆಳೆದು 2013ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ ಶಾಸಕರಾಗಿ ಆಯ್ಕೆಯಾಗಿದ್ದರು.

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಕಸಬಾ ಹೋಬಳಿ ಕ್ಯಾತನಹಳ್ಳಿ ಗ್ರಾಮದ ಶ್ರೀ ಕೆ.ಎಸ್. ಶ್ರೀಕಂಠೇಗೌಡ ಹಾಗೂ ಶ್ರೀಮತಿ ಕೆ.ಎಸ್. ಶಾರದಮ್ಮ ದಂಪತಿಯ ಜೇಷ್ಠಪುತ್ರರಾಗಿ ದಿನಾಂಕ 23.12.1949ರಲ್ಲಿ ಜನಿಸಿದ ಕೆ.ಎಸ್. ಪುಟ್ಟಣ್ಣಯ್ಯ ಕರ್ನಾಟಕ ರೈತ ಸಂಘ ಕಂಡಂತಹ ಏಕೈಕ ಧೀಮಂತ ಹೋರಾಟಗಾರ.

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಕಸಬಾ ಹೋಬಳಿ ಕ್ಯಾತನಹಳ್ಳಿ ಗ್ರಾಮದ ಶ್ರೀ ಕೆ.ಎಸ್. ಶ್ರೀಕಂಠೇಗೌಡ ಹಾಗೂ ಶ್ರೀಮತಿ ಕೆ.ಎಸ್. ಶಾರದಮ್ಮ ದಂಪತಿಯ ಜೇಷ್ಠಪುತ್ರರಾಗಿ ದಿನಾಂಕ 23.12.1949ರಲ್ಲಿ ಜನಿಸಿದ ಕೆ.ಎಸ್. ಪುಟ್ಟಣ್ಣಯ್ಯ ಕರ್ನಾಟಕ ರೈತ ಸಂಘ ಕಂಡಂತಹ ಏಕೈಕ ಧೀಮಂತ ಹೋರಾಟಗಾರ.

ವಿದ್ಯಾಭ್ಯಾಸ

ಇವರು ತಮ್ಮ ಹುಟ್ಟೂರಿನಲ್ಲಿಯೇ ಎಸ್.ಎಸ್.ಎಲ್.ಸಿ.ಯನ್ನು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮುಗಿಸಿ ಮೈಸೂರಿನಲ್ಲಿರುವ ಪ್ರತಿಷ್ಠಿತ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಮಾಡಿ ನಂತರ ಇದೇ ಮೈಸೂರಿನ ಡಿ. ಬನುಮಯ್ಯ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದಿರುತ್ತಾರೆ. ಈ ರೀತಿ ವಿದ್ಯಾರ್ಥಿಯಾಗಿದ್ದಾಗಲೇ ಹಳ್ಳಿಗಾಡುಗಳಲ್ಲಿ ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರು ಹಾಗೂ ಬಡ ಮಹಿಳೆಯರುಗಳು ಅನುಭವಿಸುತ್ತಿದ್ದ ಯಾತನಮಯ ಜೀವನಗಳನ್ನು ಕಣ್ಣಾರೆ ಕಂಡಿದ್ದ ಈ ಪದವೀದರ ಕೆ.ಎಸ್. ಪುಟ್ಟಣ್ಣಯ್ಯ ಅವರು ತಮ್ಮ ಮುಂದಿನ ವ್ಯಾಸಂಗಕ್ಕೆ ಹಾಗೂ ಸರ್ಕಾರಿ ನೌಕರಿಗೆ ಎಡತಾಕದೆ ಧೀನದಲಿತರುಗಳ ಏಳಿಗೆಗಾಗಿ ದುಡಿಯಬೇಕೆಂಬ ಅಚಲ ವಿಶ್ವಾಸದಿಂದ ಮಂಡ್ಯ ಜಿಲ್ಲೆಯಲ್ಲಿ ಈ ರೀತಿ ಕಷ್ಟ ಜೀವಿಗಳಿಗೆ ಸ್ಪಂಧಿಸುತ್ತಿದ್ದರು.
ಎಸ್.ಡಿ. ಜಯರಾಂ ರವರ ಮಾರ್ಗದರ್ಶನದಲ್ಲಿ ಆಗಸ್ಟ್ 1983ರಲ್ಲಿ ಕರ್ನಾಟಕ ರಾಜ್ಯರೈತ ಸಂಘದ ಸಾಮಾನ್ಯ ಕಾರ್ಯಕರ್ತನಾಗಿ ಪಾದಾರ್ಪಣೆಮಾಡಿ ತಮ್ಮ ಬಾಲ್ಯದಿಂದಲೂ ಬೇರೂರಿದ್ದ ಕೃಕರು, ಕೂಲಿಕಾರ್ಮಿಕರು, ಮಹಿಳೆಯರ ಶೋಷಣೆ ಇನ್ನಿತರ ಬಡ ಜನಾಂಗದವರುಗಳ ಏಳಿಗೆಗೆ ಶ್ರಮಿಸಬೇಕೆಂಬ ಮಹಾದಾಸೆುಂದ ಎಲ್ಲಾ ವರ್ಗದವರ ಪ್ರೀತಿ ಪಾತ್ರರಾಗಿ ಸಾಮಾನ್ಯ ಕಾರ್ಯಕರ್ತರಿಂದ ಪಾಂಡವಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ, ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷರಾಗಿ ಹಾಗೂ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಗಳಾಗಿ ಜನಪರ ಕಾರ್ಯಗಳನ್ನು ನೆರವೇರಿಸಿಕೊಂಡು ಬಂದು ಸಫಲತೆಯನು ಕಣ್ಣಾರೆ ಕಂಡಂತಹ ಸುಧಿನಗಳಲ್ಲಿ ಇವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಞರಾಗಿ 1999 ರಿಂದ 2012ರ ವರೆಗೆ ಸಮರ್ಥವಾಗಿ ಜವಾಬ್ದಾರಿಯನ್ನು ನಿಬಾಯಿಸಿಕೊಂಡು ಬಂದು ಸರ್ವವರ್ಗದವರನ್ನು ಒಗ್ಗೂಡಿಸಿ ಸಂಘವನ್ನು ಮುನ್ನೆಡಿಸಿಕೊಂಡು ಬಂದು ಸರ್ವರಿಗೂ ಸೇವಾ ಸೌಲಭ್ಯಗಳ ಒದಗಿಸಿಕೊಂಡು ಬಂದಂತಹ ಕೀರ್ತಿ ಈ ಶ್ರೀ ಕೆ.ಎಸ್. ಪುಟ್ಟಣ್ಣಯ್ಯನವರಿಗೆ ಸಲ್ಲಿರುತ್ತವೆ. ನಂತರ ಕರ್ನಾಟಕರಾಜ್ಯ ರೈತ ಸಂಘದ ಬೆಂಬಲಿನ ರಾಜಕೀಯ ಪಕ್ಷವಾದ, ‘ಸರ್ವೋದಯ ಕರ್ನಾಟಕ ಪಕ್ಷ’ದ ಕಾರ್ಯಾಧ್ಯಕ್ಷರಾಗಿ ಈವರೆವಿಗೂ ಸೇವೆಸಲ್ಲಿಸುತ್ತಿರುತ್ತಾರೆ.

ಈ ರೀತಿ ಸರ್ವಜನಾಂಗದವರ ಹಿತೈಯಾದ ಶ್ರೀ ಕೆ.ಎಸ್. ಪುಟ್ಟಣ್ಣಯ್ಯನವರಿಂದ ಹೆಚ್ಚಿನ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಸದುಪಯೋಗಪಡಿಸಿಕೊಳ್ಳಬೇಕೆಂಬ ಮಹದಾಸೆುಂದ ಇವರನ್ನು 1994ನೇ ಇಸವಿಯಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರರಾಗಗಿ ಚುನಾಯಿಸಿ ಜಯಶೀಲರಾಗಿ ವಿಧಾನಸಭೆ ಪ್ರವೇಶಿಸಿ ಚೊಚ್ಚಲ ಅಧಿವೇಷನದಲ್ಲಿಯೇ ವಿಜೃಂಬಿಸಿದ್ದು ಸರ್ವರಿಗೂ ತಿಳಿದಿರುವುದಾಗಿದೆ.  ಈ ಅವಧಿಯಲ್ಲಿ ವಿಧಾನ ಸಭಾಧ್ಯಕ್ಷರಾಗಿದ್ದ ಜನರುಗಳ ಜೀವನದ ಸಾರಾಂಶಗಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಏಕೈಕ ಶಾಸಕರೆಂದು ಸಹ ಪ್ರಶಂಸಿದ್ದು ಇಂದಿಗೂ ಕೂಡ ಈ ಶ್ರೀ ಕೆ.ಎಸ್. ಪುಟ್ಟಣ್ಣಯ್ಯವರರನ್ನು ಕಂಡಂತೆ ಶ್ರೀ ಎಸ್. ರಮೇಶಕುಮಾರ್‍ರವರಿಗೆ ಎಲ್ಲಿಲ್ಲದ ಆದರ ಮತ್ತು ಪ್ರೀಸುವಂತಹ ವ್ಯಕ್ತಿಯಾಗಿರುತ್ತಾರೆ.

 

Facebook Comments

Sri Raghav

Admin