ಅವಧಿಗೂ ಮುನ್ನವೇ ಬಜೆಟ್ ಅಧಿವೇಶನ ಮೊಟಕು..!

ಈ ಸುದ್ದಿಯನ್ನು ಶೇರ್ ಮಾಡಿ

santapa-session-1ಬೆಂಗಳೂರು, ಫೆ.20-ವಿಧಾನಸಭೆಯ ಅಧಿವೇಶನವನ್ನು ನಿಗದಿತ ಅವಧಿಗೂ ಮುನ್ನ ಮೊಟಕು ಗೊಳಿಸಲು ಉದ್ದೇಶಿಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆಯಲ್ಲಿ ರಾಜಕೀಯ ಪಕ್ಷಗಳು, ಶಾಸಕರು, ತೊಡಗಿಕೊಳ್ಳುತ್ತಿರುವುದರಿಂದ ಅಧಿವೇಶನ ಕಳೆ ಕಟ್ಟುತ್ತಿಲ್ಲ. ಶಾಸಕರ ನಿರಾಸಕ್ತಿ ಎದ್ದು ಕಾಣುತ್ತಿದೆ. ಇದನ್ನೇ ನೆಪ ಮಾಡಿಕೊಂಡು ಈ ತಿಂಗಳ ಅಂತ್ಯದವರೆಗೂ ನಡೆಯಬೇಕಿದ್ದ ಅಧಿವೇಶನವನ್ನು ಫೆ.23ಕ್ಕೆ ಮುಕ್ತಾಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿ ಚರ್ಚೆಯಾಗಿದೆ ಎಂದು ಮೂಲಗಳು ಹೇಳಿವೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸರ್ಕಾರ ಉತ್ತರ, ಬಜೆಟ್ ಮೇಲಿನ ಚರ್ಚೆಗೆ ಸರ್ಕಾರದ ಉತ್ತರ ನೀಡಿದ ನಂತರ ಲೇಖಾನುದಾನ ಪಡೆದು ಅಧಿವೇಶನವನ್ನು ಅನಿರ್ದಿಷ್ಟಾವಧಿ ಮುಂದೂಡಲು ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.
ಕಳೆದ ಬಾರಿ ನಡೆದ ಜಂಟಿ ಅಧಿವೇಶನ ಸಂದರ್ಭದಲ್ಲೂ ಶಾಸಕರ ಹಾಜರಾತಿ ಕೊರತೆ ಕಂಡು ಬಂದಿತ್ತು. ಬಜೆಟ್ ಅಧಿವೇಶನದ ಮೂರನೇ ದಿನವಾದ ಇಂದು ಶಾಸಕರ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಅಧಿವೇಶನ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

Facebook Comments

Sri Raghav

Admin