ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Electyiro

ವಿಜಯಪುರ,ಫೆ.22-ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಹರಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೊನ್ನೂರಿನ ನಿವಾಸಿಗಳಾದ ಮಂಜುನಾಥ್ ಕಣವಿಮಲ್ಯ(19), ತಿಪ್ಪೇಶ(20) ಮೃತಪಟ್ಟ ಯುವಕರು.  ಇಂದು ಬೆಳಗ್ಗೆ ರಸ್ತೆಯೊಂದರಲ್ಲಿ ಟ್ರಾನ್ಸ್‍ಫಾರ್ಮರ್‍ನ್ನು ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಂತಿಯೊಂದು ಇವರಿಗೆ ತಗುಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬಾಸವನಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin