ರಾಮಲಿಂಗಾರೆಡ್ಡಿ ಮೇಲೆ ಬೇನಾಮಿ ಆಸ್ತಿ ಆರೋಪ, ರಾಜೀನಾಮೆಗೆ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ramalingareddy-

ಬೆಂಗಳೂರು, ಫೆ.22-ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಮೇಲೆ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇನಾಮಿ ಹೆಸರಿನಲ್ಲಿ ಗೃಹ ಸಚಿವರು ಆಸ್ತಿ ಮಾಡಿರುವ ಆರೋಪ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಹೋರಾಟ ನಡೆಸುವುದಾಗಿ ಹೇಳಿದರು.

ಶಾಸಕ ಎಸ್.ಟಿ.ಸೋಮಶೇಖರ್ ಅವರು ಸಾರ್ವಜನಿಕರ ಮೇಲೆ ದಬ್ಬಾಳಿಕೆ ಮಾಡಿರುವ ವಿಚಾರ ಸರಿಯಲ್ಲ. ಕಾಂಗ್ರೆಸ್ ನಾಯಕರಿಂದಲೇ ಇಂತಹ ವರ್ತನೆ ಹೆಚ್ಚಾಗುತ್ತಿರುವುದು ಸರಿಯಲ್ಲ. ಜನರೇ ಮುಂದೆ ಬುದ್ದಿ ಕಲಿಸುತ್ತಾರೆ ಎಂದು ಟೀಕಿಸಿದರು. ಪಿಎಫ್‍ಐ ಸಂಘಟನೆಯನ್ನು ಈಗಾಗಲೇ ಜಾರ್ಖಂಡ್‍ನಲ್ಲಿ ಬ್ಯಾನ್ ಮಾಡಲಾಗಿದೆ. ಕೇರಳದಲ್ಲೂ ಬ್ಯಾನ್ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ನಮ್ಮ ರಾಜ್ಯದಲ್ಲೂ ಬ್ಯಾನ್ ಮಾಡುವಂತೆ ನಾವು ಹೋರಾಟ ಮಾಡುತ್ತಿದ್ದೇವೆ. ಆದರೂ ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲ. ವೋಟ್ ಬ್ಯಾಂಕ್‍ಗೋಸ್ಕರ ಪಿಎಫ್‍ಐ ಸಂಘಟನೆಯನ್ನು ನಿಷೇಧ ಮಾಡುತ್ತಿಲ್ಲ ಎಂದರು.
ಮುಖ್ಯಮಂತ್ರಿ ಪ್ರತಿಕ್ರಿಯೆ : ರಾಜ್ಯದಲ್ಲಿ ಪಿಎಫ್‍ಐ ಸಂಘಟನೆ ನಿಷೇಧಿಸುವಂತಹ ಪರಿಸ್ಥಿತಿ ಉಂಟಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಸದ್ಯಕ್ಕೆ ಪಿಎಫ್‍ಐ ಸಂಘಟನೆ ನಿಷೇಧಿಸುವ ವಿಚಾರ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin