ಹಿರಿಯ ಪತ್ರಕರ್ತ ನೀಲಭ್ ಮಿಶ್ರಾ ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

Neelabha--01

ನವದೆಹಲಿ, ಫೆ.24-ಹಿರಿಯ ಪತ್ರಕರ್ತ ಹಾಗೂ ನ್ಯಾಷನಲ್ ಹೆರಾಲ್ಡ್‍ನ ಮುಖ್ಯ ಸಂಪಾದಕ ನೀಲಭ್ ಮಿಶ್ರಾ ಇಂದು ಚೆನ್ನೈನಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಮತ್ತು ಲಿವರ್ ತೊಂದರೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮರು ಆರಂಭದಲ್ಲಿ ಮಿಶ್ರ ಪ್ರಮುಖ ಪಾತ್ರ ವಹಿಸಿದ್ದರು. ಇವರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin