ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಛಾಯಾಗ್ರಾಹಕರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಮಳವಳ್ಳಿ, ಫೆ.25-ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಪಿಳ್ಳೆ ಕೊಪ್ಪಲು ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ. ಬೊಮ್ಮನಗುಂಡಿ ಗ್ರಾಮದ ನಿವಾಸಿ ನಿತಿನ್, ಹೂವನಕೊಪ್ಪಲು ಗ್ರಾಮದ ನಿವಾಸಿ ಗಂಗಾಧರ ಮತ್ತು ದಿಲೀಪ್ ಕುಮಾರ್ ಮೃತಪಟ್ಟ ದುರ್ದೈವಿಗಳು.

ಈ ಮೂವರು ಮಳವಳ್ಳಿಯ ಕಿರುಗಾವಲಿನಲ್ಲಿ ಫೋಟೋ ಸ್ಟುಡಿಯೋದಲ್ಲಿ ಕೆಲಸ ನಿರ್ವಹಿಸುತ್ತಿದ್ದು , ಇಂದು ಬೆಳಗ್ಗೆ ಕಾರ್ಯ ನಿಮಿತ್ತ ಮಳವಳ್ಳಿಗೆ ಓಮ್ನಿ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿಗೆ ಬಂದ ಕೆಎಸ್‍ಆರ್‍ಟಿಸಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ದಿಲೀಪ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ್ದರಿಂದ ಮೈಸೂರು-ಮಳವಳ್ಳಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸರ್ಕಲ್ ಇನ್‍ಸ್ಪೆಕ್ಟರ್ ಶ್ರೀಕಾಂತ್, ಕಿರುಗಾವಲು ಪಿಎಸ್‍ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin