ನಟಿ ಶ್ರೀದೇವಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

Sridevi

ಬೆಂಗಳೂರು, ಫೆ.25-ಭಾರತೀಯ ಚಿತ್ರರಂಗದ ಖ್ಯಾತ ಅಭಿನೇತ್ರಿ ಶ್ರೀದೇವಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಹಾಗೂ ಕನ್ನಡ ಚಿತ್ರರಂಗದ ಖ್ಯಾತನಾಮರು ಸಂತಾಪ ಸೂಚಿಸಿದ್ದಾರೆ. ಅದ್ಭುತ ಅಭಿನಯದಿಂದ ಜನಪ್ರಿಯರಾಗಿದ್ದ ಶ್ರೀದೇವಿ ನಿಧನದಿಂದ ಚಿತ್ರರಂಗಕ್ಕೆ ಅಪಾರ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಹಿರಿಯ ನಟ ಅಂಬರೀಶ್, ಹಿರಿಯ ತಾರೆ ಸುಮಲತಾ ಅಂಬರೀಶ್, ಭಾರತಿ ವಿಷ್ಣುವರ್ಧನ್, ಶಿವರಾಂ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ತಾರೆಯರಾದ ಡಾ.ಶಿವರಾಜ್‍ಕುಮಾರ್, ದರ್ಶನ್, ಸುದೀಪ್, ಪುನೀತ್ ರಾಜ್‍ಕುಮಾರ್, ಯಶ್, ಉಪೇಂದ್ರ, ಹಿರಿಯ ನಿರ್ದೇಶಕರಾದ ಭಗವಾನ್, ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಭಾರ್ಗವ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು ಶ್ರೀದೇವಿ ನಿಧನಕ್ಕೆ ದು:ಖ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin