ಕಾಂಗ್ರೆಸ್‍ನಿಂದ ಮೈಸೂರು ಮೇಯರ್ ಭಾಗ್ಯವತಿ ಉಚ್ಛಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

Bhagyavati--01
ಮೈಸೂರು,ಫೆ.26-ಪಕ್ಷದ ವಿಪ್ ಉಲ್ಲಂಘಿಸಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‍ಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಮೇಯರ್ ಭಾಗ್ಯವತಿ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಿಟಿಸಲಾಗಿದೆ. ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಪಕ್ಷದ ವರಿಷ್ಠರ ಸೂಚನೆಯಂತೆ ಮತ್ತು ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅನ್ವಯಿಸುವಂತೆ ಉಚ್ಛಾಟಿಸಲಾಗಿದೆ ಎಂದು ತಿಳಿಸಿದರು.
ಜ.24ರಂದು ನಡೆದ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಕಮಲಾ ಅವರ ವಿರುದ್ದ ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ ಪಾಲಿಕೆ ಸದಸ್ಯರ ಬೆಂಬಲದೊಂದಿಗೆ ಬಂಡಾಯವಾಗಿ ಸ್ಪರ್ಧಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin