ತವರಿನಿಂದ ಬಾರದ ಪತ್ನಿ, ಸಿಟ್ಟಿಗೆದ್ದು ಮಗಳಿಗೆ ಬೆಂಕಿಯಿಟ್ಟ ಪತಿ..!

ಈ ಸುದ್ದಿಯನ್ನು ಶೇರ್ ಮಾಡಿ

Women-Fire--01

ಮೈನ್ಪುರಿ(ಉತ್ತರಪ್ರದೇಶ),ಫೆ.26- ಪತ್ನಿ ಮೇಲಿದ್ದ ಕೋಪವನ್ನು ಮಗಳ ಮೇಲೆ ತೋರಿಸಿದ ವ್ಯಕ್ತಿಯೊಬ್ಬ ಆಕೆಗೆ ಸೀಮೆಣ್ಣೆ ಸುರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.   ಪತ್ನಿ ತವರಿನಿಂದ ಬರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಗಳ ಮೈಮೇಲೆ ಸೀಮೆ ಎಣ್ಣೆ ಸುರಿದು ಜೀವಂತ ಸುಡುವ ಯತ್ನ ಮಾಡಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.  ಘಟನೆ ಉತ್ತರ ಪ್ರದೇಶದ ಮೈನ್ಪುರಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಸತೇಂದ್ರ ರಾಥೋಡ್ ಈ ಕೃತ್ಯವೆಸಗಿದ ಆರೋಪಿಯಾಗಿದ್ದಾನೆ.

ಮನೆ ಮುಂದೆ ಮಗಳಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆ ಕೂಗಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದವರು ದೌಡಾಯಿಸಿ ಅವಳನ್ನು ರಕ್ಷಿಸಲು ಮುಂದಾಗಿದ್ದಾರೆ. ಬಾಲಕಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Facebook Comments

Sri Raghav

Admin