ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ಮದ್ಯ ಮಾರಾಟ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

Alcohal--01
ದಾವಣಗೆರೆ, ಫೆ.27- ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆ ಹಾಗೂ ಮಾನ್ಯ ಪ್ರಧಾನ ಮಂತ್ರಿಗಳ ಆಗಮನದ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಇಂದು ಮತ್ತು ನಾಳೆ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಜಾತ್ರೆಯಲ್ಲಿ ಹಾಗೂ ಕಾರ್ಯಕ್ರಮದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತಾ ದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಜಾತ್ರೆ ಆಚರಣೆಯ ಸಂಭ್ರಮಕ್ಕೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21(1) ರಂತೆ ನಗರದಲ್ಲಿ ಸಂಜೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಸುತ್ತ ಮುತ್ತಲಿನ 500 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.

Facebook Comments

Sri Raghav

Admin