ಬಿಜೆಪಿಯೊಂದಿಗೆ ಜೆಡಿಎಸ್ ಒಳ ಒಪ್ಪಂದ : ಜಮೀರ್ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

Jameer-Ahamd-Khan

ಕೆಆರ್ ನಗರ, ಫೆ.28- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ಕನಸಿನ ಮಾತಾಗಿದ್ದು, 20 ರಿಂದ 30 ಸ್ಥಾನಗಳನ್ನು ಪಡೆದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರನ್ನು ಬ್ಲಾಕ್‍ಮೇಲ್ ಮಾಡುವ ಜಾಯಮಾನ ಎಂದು ಚಾಮರಾಜಪೇಟೆ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ವ್ಯಂಗ್ಯವಾಡಿದರು.  ಪಟ್ಟಣದ ಮುಸ್ಲಿಂ ಬಡಾವಣೆಯಲ್ಲಿ ತಮ್ಮ ಹೆಸರಿನಲ್ಲಿ ಆರಂಭವಾಗಿರುವ ಅಭಿಮಾನಿ ಬಳಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜೆಡಿಎಸ್‍ನವರು ಈಗಾಗಲೇ ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಂಡಿದ್ದು, ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿದ್ದಾರೆ ಎಂದರು.

ಮುಸ್ಲಿಂ ಬಾಂಧವರು ಯಾವುದೇ ಕಾರಣಕ್ಕೂ ಹಣ ಪಡೆದು ಮತ ಚಲಾಯಿಸಬಾರದು ಎಂದು ಮನವಿ ಮಾಡಿದ ಜಮೀರ್, ಜೆಡಿಎಸ್‍ಗೆ ಮತ ನೀಡಿದರೆ ಅದು ಬಿಜೆಪಿಗೆ ಮತ ಹಾಕಿದಂತೆ ಎಂದರಲ್ಲದೆ ಪಕ್ಷದಿಂದ ಹೊರ ಹಾಕಿರುವ ನನ್ನ ಗೌರವ ಕಾಪಾಡಲು ಸಮಸ್ತ ಮುಸ್ಲಿಮರು ಕಾಂಗ್ರೆಸ್‍ಗೆ ಮತ ನೀಡಿ ನನ್ನ ರಾಜಕೀಯ ಭವಿಷ್ಯಕ್ಕೆ ದಾರಿ ದೀಪವಾಗಬೇಕು ಎಂದು ಕೋರಿದರು.  ಕೆಜೆಪಿ ಪಕ್ಷದಲ್ಲಿದ್ದಾಗ ಟಿಪ್ಪು ಜಯಂತಿಗೆ ಆಗಮಿಸಿ ಕತ್ತಿ ಎತ್ತಿ ಹಿಡಿಯುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತೆ ಈಗ ಅವರ ಜಯಂತಿ ವಿರೋಧಿಸುವ ಮನಸೇಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡದಿದ್ದರೂ ಪಕ್ಷೇತರನಾಗಿ ನಿಂತು ಕಾಂಗ್ರೆಸ್ ಗೆಲುವಿಗೆ ಪಣತೊಟ್ಟು ಕೆಲಸ ಮಾಡುತ್ತೇನೆ ಎಂದು ಜಮೀರ್ ಅಹಮದ್ ಖಾನ್ ಘೋಷಿಸಿದರು.  ನಾಗಮಂಗಲ ಶಾಸಕ ಎನ್.ಚೆಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಹರ್ಷದ್, ಜಿಪಂ ವಿಪಕ್ಷ ನಾಯಕ ಡಿ.ರವಿಶಂಕರ್, ಮೈಸೂರು ಜಿಲ್ಲಾ ಜಮೀರ್ ಅಹಮದ್ ಖಾನ್ ಅಭಿಮಾನಿ ಬಳಗದ ಅಧ್ಯಕ್ಷ ಅಜೀಜ್‍ವುಲ್ಲಾ, ನಗರ ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್ ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಅಯೂಬ್‍ಖಾನ್, ಜಿಪಂ ಸದಸ್ಯ ಅಚ್ಚುತಾನಂದ, ಮಾಜಿ ಸದಸ್ಯ ಎಂ.ಟಿ.ಕುಮಾರ್, ತಾಪಂ ಅಧ್ಯಕ್ಷ ಹೆಚ್.ಟಿ.ಮಂಜುನಾಥ್, ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಸದಸ್ಯರಾದ ಚಂದ್ರಶೇಖರ್, ಕುಮಾರ್, ಪುರಸಭೆ ಸದಸ್ಯೆ ಮಹಾಲಕ್ಷ್ಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಭೋಜರಾಜು, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸುಬ್ರಮಣ್ಯ, ಜಾಮೀಯಾ ಮಸಿದಿ ಕಮಿಟಿ ಅಧ್ಯಕ್ಷ ಮಕ್ಬುಲ್‍ಖಾನ್, ಮುಸ್ಲಿಂ ಮುಖಂಡರಾದ ರಫೀಕ್ ಅಹಮದ್, ಇಸ್ಮಾಯಿಲ್, ಪೈಯಜ್ ಅಹಮದ್‍ಖಾನ್, ಸಮೀ ಉಲ್ಲಾಖಾನ್, ಶೇಖ್‍ಉಸೇನ್, ಇಮ್ರಾನ್‍ಷರೀಫ್ ಇದ್ದರು.

Facebook Comments

Sri Raghav

Admin