ಉಡುಪಿ : ರಸ್ತೆಯಲ್ಲೇ ಕೊಚ್ಚಿ ಕುಖ್ಯಾತ ರೌಡಿ ನವೀನ್ ಡಿಸೋಜಾ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Udupi-Murder--1

ಉಡುಪಿ, ಮಾ.1- ಕುಖ್ಯಾತ ರೌಡಿ ನವೀನ್ ಡಿಸೋಜಾನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಡುಬಿದ್ರೆ ಬಳಿ ಇಂದು ಮುಂಜಾನೆ ನಡೆದಿದೆ. ಕಂಜಾರ ಕಟ್ಟೆ ಬಳಿ ರಾತ್ರಿ 10 ಗಂಟೆ ಸಂದರ್ಭದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದ ನವೀನ್ ಡಿಸೋಜಾನನ್ನು ನಾಲ್ಕು ಜನರಿದ್ದ ದುಷ್ಕರ್ಮಿಗಳ ತಂಡ ಮನಸೋ ಇಚ್ಛೆ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಇಲ್ಲಿನ ಗ್ಲೋರಿಯಾ ಬಾರ್‍ನಲ್ಲಿ ಸ್ನೇಹಿತರ ಜತೆ ಪಾರ್ಟಿ ಮಾಡಿ ಹೊರ ಬಂದಾಗ ಕೊಚ್ಚು ಹಾಕಿದ್ದ ತಂಡ ಅವರನ್ನು ಹಿಂಬಾಲಿಸಿ ಈ ಕೃತ್ಯ ನಡೆಸಿದೆ ಎಂದು ಹೇಳಲಾಗುತ್ತಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಎದುರಾಳಿ ತಂಡ ಕೊಲೆ ಮಾಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ನವೀನ್ ಡಿಸೋಜಾ ಮೇಲೆ ಕರಾವಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಕೊಲೆ ಯತ್ನ , ದರೋಡೆ ಪ್ರಕರಣಗಳು ದಾಖಲಾಗಿತ್ತು ಮತ್ತು ಈತ ರೌಡಿ ಶೀಟರ್ ಪಟ್ಟಿಯಲ್ಲೂ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments

Sri Raghav

Admin