ಪೊಲೀಸ್ ಇಲಾಖೆಯಲ್ಲಿ ಕೆ.ಎಸ್.ಆರ್.ಪಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

KSRP

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್’ಟೇಬಲ್ (ಕೆ.ಎಸ್.ಆರ್.ಪಿ) ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ಸಂಖ್ಯೆ : 419
ಹುದ್ದೆಗಳ ವಿವರ
1.ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್’ಟೇಬಲ್ (ಕೆ.ಎಸ್.ಆರ್.ಪಿ) (ಪುರುಷ) (ಹೈ-ಕ) ಸ್ಥಳೀಯ – 100
2.ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್’ಟೇಬಲ್ (ಕೆ.ಎಸ್.ಆರ್.ಪಿ) (ಪುರುಷ) ಐಆರ್’ಬಿ ಘಟಕ (ಹೈ-ಕ) ಸ್ಥಳೀಯ – 319
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ / 10ನೇ ತರಗತಿ ಅಥವಾ ಇದಕ್ಕೆ ಸಮನಾದ ಶಿಕ್ಷಣ ಪಡೆದಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ನಿಗದಿಮಾಡಲಾಗಿದೆ. ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 25 ವರ್ಷ, ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ 27 ವರ್ಷ, ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷದವರೆಗೆ ನಿಗದಿಗೊಳಿಸಲಾಗಿದೆ.
ಶುಲ್ಕ : ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ರೂ, ಪ,ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-03-2018
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 21-03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.ksp.gov.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin