ಬೆಂಗಳೂರು ಅಭಿವೃದ್ಧಿಗೆ ಸಿದ್ದರಾಮಯ್ಯರ ಕೊಡುಗೆ ಅಪಾರ : ಮಾಜಿ ಮೇಯರ್ ಪದ್ಮಾವತಿ

ಈ ಸುದ್ದಿಯನ್ನು ಶೇರ್ ಮಾಡಿ

Padmavati--01

ಬೆಂಗಳೂರು,ಮಾ.3-ನಗರದಲ್ಲಿ ಮಾದರಿ ರಸ್ತೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿಗೆ 7300 ಕೋಟಿ ರೂ.ಗಳ ಅನುದಾನ ನೀಡಿರುವುದೇ ಕಾರಣ ಎಂದು ಮಾಜಿ ಮೇಯರ್ ಜಿ.ಪದ್ಮಾವತಿ ಅಭಿಪ್ರಾಯಪಟ್ಟರು.  ಪದ್ಮಾವತಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಖ್ಯಮಂತ್ರಿಗಳು ನಗರಕ್ಕೆ ನೀಡಿರುವ ಬೃಹತ್ ಅನುದಾನದಿಂದ ಹಲವಾರು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಬೆಂಗಳೂರು ಮತ್ತೆ ತನ್ನ ಗತವೈಭವಕ್ಕೆ ಮರಳುತ್ತಿದೆ ಎಂದರು. ಸಾರ್ವಜನಿಕರು ಸರ್ಕಾರ ಮತ್ತು ಬಿಬಿಎಂಪಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಇದು ನಿಮ್ಮ ಹಕ್ಕು ಎಂದು ಕರೆ ನೀಡಿದರು.

ಹುಟ್ಟುಹಬ್ಬದ ಅಂಗವಾಗಿ ಕಲ್ಯಾಣ ಇಲಾಖೆ ವತಿಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ, ಕ್ರೀಡಾ ಸಾಮಾಗ್ರಿಗಳು, ಇಸ್ತ್ರಿ ಪೆಟ್ಟಿಗೆ ಮತ್ತಿತರ ಸಲಕರಣಿಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯೆ ಮಂಜುಳಾ ವಿಜಯ್‍ಕುಮಾರ್, ಕಾಂಗ್ರೆಸ್ ಮುಖಂಡರಾದ ವಿಜಯ್‍ಕುಮಾರ್, ವಿಶ್ವನಾಥ್ ಬಾಬು, ಶಿವಣ್ಣ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin