3 ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಸಿದ್ದರಾಮಯ್ಯ ಏನಂದ್ರು..?

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-CM--01
ಬೆಂಗಳೂರು, ಮಾ.3-ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಅವರು ಸದಾ ಸುಳ್ಳು ಹೇಳುವ ನಕಲಿ ಜನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇತ್ತೀಚೆಗೆ ಬಿಜೆಪಿ ಬಿಡುಗಡೆ ಮಾಡಿದ ಲೆಕ್ಕ ಕೊಡಿ ಎಂಬ ಕಿರುಹೊತ್ತಿಗೆಯಲ್ಲಿ ಪ್ರಕಟಿಸಿರುವ ಎಲ್ಲಾ ಫೋಟೋ ಮತ್ತು ಮಾಹಿತಿಗಳು ನಕಲಿಯಾಗಿವೆ ಎಂದು ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅವರಿಗೆ ಯಾವತೂ ಸತ್ಯ ಹೇಳಿ ಗೊತ್ತಿಲ್ಲ, ನಕಲಿ ಜನಗಳು ಎಂದು ಲೇವಡಿ ಮಾಡಿದರು.

ಬೇರೆ ಚುನಾವಣೆಗಳು ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ:

ನಾಗಾಲ್ಯಾಂಡ್, ತ್ರಿಪುರಾ, ಮೇಘಾಲಯದಲ್ಲಿ ನಡೆದ ಚುನಾವಣೆಗಳ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಮೂರೂ ರಾಜ್ಯಗಳಷ್ಟೇ ಅಲ್ಲ, ಯಾವುದೇ ರಾಜ್ಯಗಳ ಚುನಾವಣೆ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಇನ್ನೊಂದೆಡೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ಕುರಿತಂತೆ ಈಗಾಗಲೇ ನಾಗಮೋಹನ್‍ದಾಸ್ ನೇತೃತ್ವದ ಸಮಿತಿ ವರದಿ ನೀಡಿದೆ. ವರದಿಯಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ. ಅದನ್ನು ನೋಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

Facebook Comments

Sri Raghav

Admin