ಗುಂಡಾಗಿರಿ ಮಾಡಿದ್ದ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Nalapad-Jail-Nalpad--01
ಬೆಂಗಳೂರು. ಮಾ.೦7 : ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 21ರವರೆಗೂ ಮುಂದೂಡಿದೆ. ನಲಪಾಡ್ ನ್ಯಾಯಾಂಗ ಬಂಧನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ನಲಪಾಡ್ ರನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಹಮದ್ ನಲಪಾಡ್ ನನ್ನು ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಿದ್ದರು.

ಈ ಪ್ರಕರಣ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ್ ಹರೀಶ್ ಕುಮಾರ್, ವಿಶೇಷ ಸಾರ್ವಜನಿಕ ಅಭಿಯೋಜಕರ ಆಕ್ಷೇಪಣೆಗೆ ಎರಡು ದಿನಗಳ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮುಂದೂಡಿದ್ದರು. ಈ ವೇಳೆ ನಲಪಾಡ್ ಪರ, ಮತ್ತು ವಿದ್ವತ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಅಂದರೆ ಮಾರ್ಚ್ 21ರವರೆಗೂ ವಿಸ್ತರಣೆ ಮಾಡಿದ್ದಾರೆ

ನಗರದ ಪ್ರತಿಷ್ಠಿತ ಯುಬಿ ಸಿಟಿಯ ಪರ್ಜಿ ಕೆಪೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆರೆ ನಲಪಾಡ್ ಹ್ಯಾರಿಸ್ ಹಾಗೂ ಆತನ ಆರು ಮಂದಿ ಸಹಚರರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿಯನ್ನು ಇತ್ತೀಚಿಗೆ ಕೆಳ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆಯಲ್ಲಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿದೆ.

Facebook Comments

Sri Raghav

Admin