ಕಚೇರಿಯಗೆ ಬಂದ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗೆ ಹೂವಿನ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.8- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಬಿಬಿಎಂಪಿ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗೆ ಆಯುಕ್ತ ಮಂಜುನಾಥ್ ಪ್ರಸಾದ್ ಗುಲಾಬಿ ಹೂ ನೀಡಿ ಸ್ವಾಗತ ಕೋರಿದರು.  ಪಾಲಿಕೆ ಕಚೇರಿಯ ದ್ವಾರದಲ್ಲಿ ಆಯುಕ್ತ ಮಂಜುನಾಥ್ ಪ್ರಸಾದ್, ಜೆಡಿಎಸ್ ಗುಂಪಿನ ನಾಯಕಿ ನೇತ್ರ ನಾರಾಯಣ್, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಸೇರಿದಂತೆ ಜೆಡಿಎಸ್ ಮಹಿಳಾ ಸದಸ್ಯರು ಹಾಗೂ ಪಾಲಿಕೆ ಮಹಿಳಾ ಸಿಬ್ಬಂದಿಗೆ ಹೂ ನೀಡಿ ಅಭಿನಂದನೆ ಸಲ್ಲಿಸಿದರು. ಬಿಬಿಎಂಪಿಯಲ್ಲಿ ಸುಮಾರು 100 ಮಂದಿ ಮಹಿಳಾ ಸದಸ್ಯರಿದ್ದಾರೆ. ಅದೇ ರೀತಿ ಅಧಿಕಾರಿಗಳು, ಸಿಬ್ಬಂದಿಗಳು ಬಹಳಷ್ಟು ಮಂದಿ ಇದ್ದು ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಗುಲಾಬಿ ಹೂ ನೀಡಿ ನಗುಮೊಗದ ಸ್ವಾಗತಕೋರಿ ಅಭಿನಂದಿಸಿದರು. ಈ ವೇಳೆ ಶಾಸಕ ಕೆ.ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಮತ್ತಿತರರು ಕೂಡ ಮಹಿಳೆಯರಿಗೆ ಶುಭ ಹಾರೈಸಿದರು.

BBMP-Offi

Facebook Comments

Sri Raghav

Admin