ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ : ಪ್ರಜ್ವಲ್ ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Prajwal-Revanna--02

ಬೆಂಗಳೂರು, ಮಾ.8- ಪಕ್ಷದಿಂದ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಇಲ್ಲವಾದರೆ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸ್ಪಷ್ಟಪಡಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಷಯ ದೊಡ್ಡವರಿಗೆ ಬಿಟ್ಟ ವಿಷಯ. ಅವರು ಕೊಟ್ಟರೆ ಸ್ಪರ್ಧಿಸುತ್ತೇನೆ. ಇಲ್ಲವಾದರೆ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದ ಪ್ರಜ್ವಲ್, ಮುನಿರತ್ನಂ ಅವರನ್ನು ರಾಜರಾಜೇಶ್ವರಿನಗರ ಕ್ಷೇತ್ರದಿಂದ ಓಡಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಎರಡನೆ ಪಟ್ಟಿಯಲ್ಲಿ ನನ್ನ ಹೆಸರು ಇರುತ್ತದೋ, ಇಲ್ಲವೋ ಗೊತ್ತಿಲ್ಲ. ಪಕ್ಷದ ವರಿಷ್ಠರು ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಈ ವಿಷಯದಲ್ಲಿ ನನಗಾಗಲಿ, ಕುಮಾರಸ್ವಾಮಿ ಅವರಿಗಾಗಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin