ಮರಕ್ಕೆ ಕಾರು ಅಪ್ಪಳಿಸಿ ಐವರು ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--02

ಹೈದರಾಬಾದ್, ಮಾ.9-ಮರಕ್ಕೆ ಕಾರೊಂದು ಅಪ್ಪಳಿಸಿ ಐವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ತೀವ್ರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ಪಾಲಿಪಾಡು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಏಳು ಮಂದಿ ಇದ್ದ ಇನ್ನೋವಾ ಕಾರು ರಾಜ್ಯ ಹೆದ್ದಾರಿಯಲ್ಲಿ ಮರವೊಂದಕ್ಕೆ ಅಪ್ಪಳಿಸಿತು. ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin