ಎನ್‍ಕೌಂಟರ್ ನಲ್ಲಿ 3 ಉಗ್ರರು ಖತಂ, ಶಸ್ತ್ರಾಸ್ತ್ರ ವಶ

ಈ ಸುದ್ದಿಯನ್ನು ಶೇರ್ ಮಾಡಿ

Encounter--01
ಶ್ರೀನಗರ, ಮಾ.12- ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರಗಾಮಿಗಳು ಹತರಾಗಿದ್ದಾರೆ. ಹೊಡೆದುರುಳಿಸಲ್ಪಟ್ಟ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನದ 400ಕ್ಕೂ ಹೆಚ್ಚು ಭಯೋತ್ಪಾದಕರು ಗಡಿ ಮೂಲಕ ಭಾರತದೊಳಗೆ ನುಸುಳಿ ವಿಧ್ವಂಸಕ ಕೃತ್ಯಗಳನ್ನು ನಡೆಸಲಿದ್ದಾರೆ ಎಂಬ ಗುಪ್ತಚರ ವರದಿಗಳ ಬೆನ್ನಲ್ಲೇ ಕಾಶ್ಮೀರ ಕಣಿವೆಂiÀಲ್ಲಿ ಉಗ್ರಗಾಮಿಗಳ ಉಪಟಳ ಮುಂದುವರಿದಿದೆ. ಆದರೆ ಉಗ್ರರನ್ನು ಮಟ್ಟಹಾಕುವ ಕಾರ್ಯಾಚರಣೆಯನ್ನು ಯೋಧರು ತೀವ್ರಗೊಳಿಸಿದ್ದಾರೆ.

ಅನಂತನಾಗ್ ಜಿಲ್ಲೆಯ ಹಕುರಾ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ರಾತ್ರಿ ಸೇನೆ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ನಡೆಸುತ್ತಿತ್ತು. ಇಂದು ನಸುಕಿನಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಮೂವರು ಭಯೋತ್ಪಾದಕರು ಹತರಾದರೆಂದು ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ. ಮೃತ ಉಗ್ರರಿಂದ ಎಕೆ-47 ರೈಫಲ್‍ಗಳು, ಪಿಸ್ತೂಲ್‍ಗಳು ಮತ್ತು ಹ್ಯಾಂಡ್ ಗ್ರೆನೇಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶ್ರೀನಗರ ಸೌರ ಪ್ರದೇಶದಲ್ಲಿ ಕಾನ್ಸ್‍ಟೆಬಲ್ ಒಬ್ಬರನ್ನು ಬಲಿ ತೆಗೆದುಕೊಂಡ ಪೊಲೀಸ್ ಪೋಸ್ಟ್ ಮೇಲಿನ ದಾಳಿಯಲ್ಲಿ ಈ ಉಗ್ರರು ಶಾಮೀಲಾಗಿದ್ದರು ಎಂಬುದು ಖಚಿತವಾಗಿದೆ. ಈ ಪ್ರದೇಶದಲ್ಲಿ ಅವಿತಿಟ್ಟುಕೊಂಡಿರಬಹುದಾದ ಉಗ್ರರಿಗಾಗಿ ಶೋಧ ಮುಂದುವರಿದಿದೆ. ಮುಚ್ಚರಿಕೆ ಕ್ರಮವಾಗಿ ಈ ಪ್ರದೇಶದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

Facebook Comments

Sri Raghav

Admin